Breaking News

35 ಮಂದಿ ರೈತರ ಮೇಲೆ ಎಫ್‍ಐಆರ್ ದಾಖಲು

Spread the love

ಹಾವೇರಿ: ಕೊರೊನಾ ನಿಯಮ ಉಲ್ಲಂಘಿಸಿ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಇಂಡಿಯನ್ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದ 30 ರಿಂದ 35 ರೈತರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ.

2019ರಲ್ಲಿ ಸಾಲಮನ್ನಾ ಯೋಜನೆಯಡಿ ಹಣ ಬಿಡುಗಡೆಯಾದ್ರೂ ರೈತರ ಖಾತೆಗೆ ಹಣ ಜಮಾ ಆಗಿಲ್ಲವೆಂದು ರೈತರು ಪ್ರತಿಭಟನೆ ಮಾಡಿದ್ದರು. ಕೊರೊನಾ ಎರಡನೇ ಅಲೆಯ ಅಬ್ಬರವಿದ್ದರೂ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಿದ್ದಕ್ಕೆ, ವಿಪತ್ತು ನಿರ್ವಹಣಾ ಕಾಯ್ದೆಯಡಿ ರಾಣೆಬೆನ್ನೂರು ನಗರಠಾಣೆ ಪಿಎಸ್‍ಐ ಪ್ರಭು ಕೆಳಗಿನಮನಿ ಪ್ರಕರಣ ದಾಖಲು ಮಾಡಿದ್ದಾರೆ.

ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆಯದೆ ಅಕ್ರಮ ಕೂಟ ಕಟ್ಟಿಕೊಂಡು ನಿನ್ನೆ ಪ್ರತಿಭಟನೆ ಮಾಡಿದ್ದಕ್ಕೆ ದೂರು ದಾಖಲು ಮಾಡಲಾಗಿದೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಭೀಕರ ಅಪಘಾತ – ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು

Spread the loveಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ