Home / ರಾಜ್ಯ / ಲಾಕ್​ಡೌನ್ ಜಾರಿ ಮಾಡಲಾಗುತ್ತಾ ಎಂಬ ಭೀತಿಯಿಂದ ಜನರು ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ.

ಲಾಕ್​ಡೌನ್ ಜಾರಿ ಮಾಡಲಾಗುತ್ತಾ ಎಂಬ ಭೀತಿಯಿಂದ ಜನರು ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ.

Spread the love

ಬೆಂಗಳೂರು: ಕೊರೊನಾ ಎರಡನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಿ ಇಂದಿನ ಸರ್ವ ಪಕ್ಷ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಈ ನಡುವೆ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಲಾಕ್​ಡೌನ್ ಜಾರಿ ಮಾಡಲಾಗಿದ್ದು, ಬೆಂಗಳೂರಿನಲ್ಲೂ ಲಾಕ್​ಡೌನ್ ಜಾರಿ ಮಾಡಲಾಗುತ್ತಾ ಎಂಬ ಭೀತಿಯಿಂದ ಜನರು ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ.

ಲಾಕ್​ಡೌನ್ ಮಾಡ್ತಾರೆ ಎಂಬ ಭಾವನೆಯೊಂದಿಗೆ ರಾಜಾಜಿನಗರ 6 ಬ್ಲಾಕ್ ನಲ್ಲಿರೋ ವಿಕ್ಟೋರಿಯಸ್ ವೈನ್ಸ್ ಮುಂದೆ ಜನರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡು ಬಂತು. ಲಾಕ್​ಡೌನ್ ಆದ್ರೆ ಮದ್ಯದ ಸಮಸ್ಯೆ ಎದುರಾಗಬಾರದು ಎಂದು ನಿರ್ಧರಿಸಿದ್ದ ಜನರು ಬ್ಯಾಗ್​ಗಳನ್ನು ಹಿಡಿದು ಸಾಲಿನಲ್ಲಿ ನಿಂತಿದ್ದು ಕಂಡು ಬಂತು. ನಗರದ ಹಲವು ಬಾರ್​ಗಳ ಎದುರು ಇದೇ ದೃಶ್ಯಗಳು ಕಂಡು ಬಂದಿದ್ದವು.

ಇನ್ನು ನಗರದಲ್ಲಿ ಬೆಳಗ್ಗೆಯಿಂದಲೇ ಹಲವು ಕೂಲಿ ಕಾರ್ಮಿಕರು, ಜನ ಸಾಮಾನ್ಯರು, ಪ್ರವಾಸಿ ಕಾರ್ಮಿಕರು ಲಾಕ್​ಡೌನ್ ಭೀತಿಯಿಂದ ಬೆಂಗಳೂರಿನಿಂದ ತೆರಳುತ್ತಿದ್ದ ದೃಶ್ಯಗಳು ನಗರದ ರೈಲ್ವೆ ಹಾಗೂ ಬಸ್​ ನಿಲ್ದಾಣದಲ್ಲಿ ಕಂಡು ಬಂದಿತ್ತು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ