ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಳ್ಳೆಯ ಕೆಲಸ ಮಾಡಿದ್ದು, ಈ ಬಾರಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ 20 ವರ್ಷಗಳಿಂದ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಈ ಬಾರಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲ್ಲುವುದು ಖಚಿತ. ಎಂಇಎಸ್ ಅಭ್ಯರ್ಥಿ ಸ್ಪರ್ಧೆ ಮಾಡಿರುವುದು ನಮಗೆ ಯಾವುದೇ ತೊಂದರೆಯಾಗಿಲ್ಲ. ನಮ್ಮ ಮತಗಳು ನಮಗೆ ಇರುತ್ತವೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ನಾಲ್ವರು ಸಚಿವರು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು. ಲಾಕ್ ಡೌನ್ ಮಾಡುವುದರಿಂದ ಕಾರ್ಖಾನೆ ಬಂದ್ ಆಗುತ್ತವೆ. ಕಾರ್ಮಿಕರು ಮನೆಯಲ್ಲಿರಬೇಕಾಗುತ್ತದೆ. ಸರ್ಕಾರ ಅನಾವಶ್ಯಕವಾಗಿ ತಿರುಗಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Laxmi News 24×7