Breaking News
Home / ರಾಜಕೀಯ / ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು

ನಾಸಿಕ್ ನಲ್ಲಿ ಆಕ್ಸಿಜನ್ ಸಿಲಿಂಡರ್ ಸೋರಿಕೆ : 22 ಮಂದಿ ಸಾವು

Spread the love

ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ನಲ್ಲಿ ಕೋವಿಡ್ -19 ರೋಗಿಗಳಿಗೆ ಸಿವಿಕ್ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ರೋಗಿಗಳು ಬುಧವಾರ (ಏಪ್ರಿಲ್ 21) ಸಾವನ್ನಪ್ಪಿದ್ದಾರೆ ಎಂಬ ವರದಿಯಾಗಿದೆ.

 

ಜಾಕಿರ್ ಹುಸೇನ್ ಪುರಸಭೆಯ ಆಸ್ಪತ್ರೆಯಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಾಸದಿಂದಾಗಿ 22 ಜನರು ಸಾವನ್ನಪ್ಪಿದ್ದಾರೆ. ರೋಗಿಗಳು ವೆಂಟಿಲೇಟರ್‌ ಗಳಲ್ಲಿದ್ದರು ಮತ್ತು ಆಮ್ಲಜನಕದ ಪೂರೈಕೆಯಾಗುತ್ತಿದ್ದರೂ, ಆಮ್ಲಜನಕ ಪೂರೈಕೆ ತೊಟ್ಟಿಯಲ್ಲಿ ಸೋರಿಕೆಯ ಕಾರಣದಿಂದ ಈ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾಧಿಕಾರಿ ಸೂರಜ್ ಮಾಂಧಾರೆ, ಆಮ್ಲಜನಕ ಸಂಗ್ರಹ ಘಟಕದಲ್ಲಿ ಸೋರಿಕೆ ಕಾರಣದಿಂದಾಗಿ ಈ ಘಟನೆ ನಡೆದಿದೆ. ಘಟನೆ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ನಗರಸಭೆ ಸಿಲಿಂಡರ್‌ಗಳನ್ನು ಸ್ಥಳಾಂತರಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ