Breaking News

ಟಂಟಂಗೆ ಲಾರಿ ಡಿಕ್ಕಿ: 5 ಕೂಲಿ ಕಾರ್ಮಿಕರು ಸಾವು

Spread the love

ಟಂಟಂ ಆಟೋಗೆ ಕಾಂಕ್ರಿಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಯಾದಗಿರಿಯಲ್ಲಿ ಸಂಭವಿಸಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕೊಳೂರು ಎಂ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದ್ದು, ಐವರು ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟರೆ ಮೂವರಿಗೆ ಗಂಭೀರ ಗಾಯಗಳಾಗಿವೆ.

ವಡಗೇರ ತಾಲೂಕಿನ ಮುನಮುಟಗಿ ಗ್ರಾಮಸ್ಥರಾದ ಅಯ್ಯಮ್ಮ (60) ಶರಣಮ್ಮ (40) ಕಾಸೀಂಬೀ (40) ಭೀಮಬಾಯಿ (40) ದೇವಿಂದ್ರಮ್ಮ (70) ಮೃತ ದುರ್ದೈವಿಗಳು.

ಕೂಲಿ ಕೆಲಸಕ್ಕಾಗಿ ಕಾರ್ಮಿಕರು ಮುನಮುಟಗಿ ಗ್ರಾಮದಿಂದ ದೇವದುರ್ಗದ ಕಡೆ ಟಂಟಂ ಆಟೋದಲ್ಲಿ ತೆರಳುತ್ತಿದ್ದ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ