Breaking News

ಹೈಕೋರ್ಟ್‌ ಆದೇಶದ ಹಿನ್ನೆಲೆ: ʼಸಾರಿಗೆ ನೌಕರʼರ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್..!

Spread the love

ಬೆಂಗಳೂರು: 6ನೇ ವೇತನ ಆಯೋಗದ ಜಾರಿಗಾಗಿ ಪಟ್ಟು ಹಿಡಿದ ಕುಳಿತಿದ್ದ ಸಾರಿಗೆ ನೌಕಕರ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್‌ ಬಿದ್ದು, ಸೇವೆ ಹಾಜರಾಗುವುದಾಗಿ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ. ‌

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌, ‘ಸಾರಿಗೆ ನೌಕರರ ಮುಷ್ಕರವನ್ನ ತಾತ್ಕಾಲಿಕವಾಗಿ ಹಿಂಪಡೆಯುತ್ತೇವೆ. ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸೇವೆಗೆ ಹಾಜರಾಗ್ತೇವೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ‘ನ್ಯಾಯಮೂರ್ತಿಗಳ ಹೇಳಿಕೆವನ್ನ ನಾವು ಗೌರವಿಸುತ್ತೇವೆ. ಈ ಪರಿಸ್ಥಿತಿಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಸಾರ್ವಜನಿಕರಿಗೆ ತೊಂದರೆ ನೀಡ್ಬೇಡಿ. ಸೇವೆಗೆ ಹಿಂದಿರುಗಿ ಎಂದಿದ್ದಾರೆ. ಹಾಗಾಗಿ ನಾವು ನಮ್ಮ ನಿರ್ಧಾರದಿಂದ ತಾತ್ಕಾಲಿಕವಾಗಿ ಹಿಂದೆ ಸರಿಯುತ್ತಿದ್ದೇವೆ’ ಎಂದರು. ಕೂಡಲೇ ತಮ್ಮ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಾರಿಗೆ ನೌಕರರು ತಮ್ಮ ಪ್ರತಿಭಟನೆಯನ್ನ ಕೈಬಿಟಿದ್ದು, ಸೇವೆಗೆ ಹಿಂದಿರುಗುವುದಾಗಿ ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟ ಪಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ