ಬೆಂಗಳೂರು : ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ತಮ್ಮ ನಿವಾಸದ ಬಾಗಿಲಿಗೆ ಬೋರ್ಡ್ ಒಂದನ್ನು ಹಾಕಿದ್ದಾರೆ.
ಕೋವಿಡ್ ಮೊದಲ ಅಲೆಯಲ್ಲಿ ಸಿದ್ದರಾಮಯ್ಯನವರಿಗೆ ಸೋಂಕು ತಗುಲಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಅವರು ಸದ್ಯ ಎಲ್ಲಿಗೆ ಹೋದರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುತ್ತಿದ್ದಾರೆ. ಅಲ್ಲದೆ ಕೋವಿಡ್ ಸೋಂಕಿನ ಬಗ್ಗೆ ತುಂಬಾ ಜಾಗೃತರಾಗಿದ್ದಾರೆ.
ರಾಜ್ಯದಲ್ಲಿ ನಿನ್ನೆ 21,794 ಜನಕ್ಕೆ ಕೋವಿಡ್ ಸೋಂಕು ತಗುಲಿದೆ. ಅಲ್ಲದೆ 149 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದೇ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಮನೆಗೆ ಬರದಂತೆ ಸಿದ್ದರಾಮಯ್ಯ ಬೋರ್ಡ್ ಹಾಕಿದ್ದಾರೆ.
Laxmi News 24×7