Breaking News
Home / ರಾಜ್ಯ / ಉಡುಪಿ; ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ

ಉಡುಪಿ; ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ

Spread the love

ಉಡುಪಿ, ಏಪ್ರಿಲ್ 21; ಹಲವಾರು ವರ್ಷಗಳಷ್ಟು ಇತಿಹಾಸ ಹೊಂದಿರುವ ಉಡುಪಿಯ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ ಮಾಡಲಾಗಿದೆ. ಮೇ 11 ರಿಂದ 14ರ ವರೆಗೆ ಪಟ್ಟಾಭಿಷೇಕ ಪ್ರಕ್ರಿಯೆ ನಡೆಯಲಿದೆ.

ಬುಧವಾರ ಸೋದೆ ವಿಶ್ವವಲ್ಲಭ ತೀರ್ಥ ಶ್ರೀಪಾದರಿಂದ ಶಿರೂರು ಮಠಕ್ಕೆ ನೂತನ ಪೀಠಾಧಿಕಾರಿ ಘೋಷಣೆಯಾಗಿದೆ. 16 ವರ್ಷದ ವಟು ಅನಿರುದ್ಧ್ ಸರಳತ್ತಾಯ ಮಠಕ್ಕೆ ಉತ್ತರಾಧಿಕಾರಿಯಾಗಿದ್ದಾರೆ.

 

ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ವಟು ಅನಿರುದ್ಧ ಸರಳತ್ತಾಯ ಎಸ್‌ಎಸ್‌ಎಲ್‌ಸಿ ಯನ್ನು ಉಡುಪಿಯ ವಿದ್ಯೋದಯ ಹೈಸ್ಕೂಲಿನಲ್ಲಿ ಪೂರ್ಣಗೊಳಿಸಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ನಿಡ್ಲೆ ಮೂಲದವರು.

 

ಮೇ 11ರಿಂದ 14ರ ವರೆಗೆ ಪಟ್ಟಾಭಿಷೇಕ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯ ಸೋಂದಾ ಮಠದಲ್ಲಿ ನಡೆಯಲಿದೆ. ಅಷ್ಟಮಠಗಳಲ್ಲಿ ಬಾಲಸನ್ಯಾಸ ಸ್ವೀಕಾರ ಸಂಪ್ರದಾಯ ಇದೆ. ಸಂಪ್ರದಾಯದ ಪ್ರಕಾರವೇ ವಟುವಿನ ಆಯ್ಕೆ ನಡೆದಿದೆ.

 

“ಅಷ್ಟಮಠಗಳ ಯತಿಗಳಿಂದ ಸನ್ಯಾಸ ವಿಚಾರದಲ್ಲಿ ಯಾವುದೇ ಸಂವಿಧಾನ ರಚನೆಯಾಗಿಲ್ಲ. ಎಲ್ಲಾ ಯತಿಗಳ ಗಮನಕ್ಕೆ ತಂದು ಶಿಷ್ಯನ ಆಯ್ಕೆ ಮಾಡಿದ್ದೇವೆ” ಎಂದು ಸೋದೆ ವಿಶ್ವವಲ್ಲಭತೀರ್ಥ ಸ್ವಾಮೀಜಿ ಹೇಳಿದರು.

ಜುಲೈ 19, 2018ರಂದು ಸಂಶಯಾಸ್ಪದ ರೀತಿಯಲ್ಲಿ ಲಕ್ಷ್ಮೀವರತೀರ್ಥ ಸ್ವಾಮೀಜಿ ನಿಧನ ಹೊಂದಿದ್ದರು. ಬಳಿಕ ಸೋದೆ ಮಠ ಉಡುಪಿಯ ಶಿರೂರು ಮಠ ಮಠದ ವ್ಯವಹಾರ, ಆಸ್ತಿಪಾಸ್ತಿ, ತೆರಿಗೆ ನಿರ್ವಹಣೆ ನೋಡಿಕೊಳ್ಳುತ್ತಿದೆ.

ಆಡಳಿತದಲ್ಲಿ ಪಾರದರ್ಶಕತೆ ಇಲ್ಲ ಎಂಬ ಆರೋಪವಿದ್ದು, ಈ ಬಗ್ಗೆ ರಾಜ್ಯ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿಯನ್ನು ಸಹ ಸಲ್ಲಿಕೆ ಮಾಡಲಾಗಿದೆ. ಅರ್ಜಿ ವಿಚಾರಣೆ ಬಾಕಿ ಇರುವಾಗ ನೂತನ ಪೀಠಾಧಿಪತಿ ಘೋಷಣೆ ಮಾಡಬಾರದು ಎಂದು ಸಹ ಒತ್ತಾಯಿಸಲಾಗಿತ್ತು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ