ಯಾದಗಿರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಯಾದಗಿರಿ ಜಿಲ್ಲೆಯ ಸುರಪುರ ನಗರದ ಸಬ್ ಜೈಲಿನಲ್ಲಿ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಯಾದಗಿರಿ ಜಿಲ್ಲಿಯ ಸುರಪುರದ ಸಬ್ ಜೈಲ್ ನಲ್ಲಿ 24 ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮತ್ತಷ್ಟು ಕೈದಿಗಳು ಹಾಗೂ ಸಿಬ್ಬಂದಿಗಳ ಕೋವಿಡ್ ಟೆಸ್ಟ್ ಮಾಡಲಾಗಿದೆ. ಜೈಲಿನ 24 ಕೈದಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜೈಲಿಗೆ ಹೊರಗಿನವರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಜೈಲಿನ ಸುತ್ತ ಮುಳ್ಳಿನ ಬೇಲಿ ಹಾಕಲಾಗಿದೆ. ಮಿನಿ ಕಂಟೈನ್ ಮೆಂಟ್ ಮಾಡಲಾಗಿದೆ.
ಇನ್ನು ರಾಜ್ಯದಲ್ಲಿ ನಿನ್ನೆ ಒಂದೇ ದಿನ 23558 ಹೊಸ ಪ್ರಕರಣಗಳು ದಾಖಲಾಗಿವೆ . ಈ ಮೂಲಕ ರಾಜ್ಯದಲ್ಲಿ ಸೋಂಕಿಗೆ ತುತ್ತಾದವರ ಸಂಖ್ಯೆ 1222202 ಕ್ಕೆ ಏರಿಕೆಯಾಗಿದೆ. 116 ಜನರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 13762 ಕ್ಕೆ ಏರಿಕೆಯಾಗಿದೆ.
Laxmi News 24×7