Breaking News

ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ

Spread the love

ನವದೆಹಲಿ, : ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾದ ಜನವರಿ ತಿಂಗಳಿನಿಂದ ಇಂದಿನವರೆಗೂ ಶೇ.23ರಷ್ಟು ಡೋಸ್ ಲಸಿಕೆಯನ್ನು ವ್ಯರ್ಥವಾಗಿ ಹಾಳು ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ವರದಿಯಿಂದ ತಿಳಿದು ಬಂದಿದೆ. ತಮಿಳುನಾಡಿನಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕಿನ ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತಮಿಳುನಾಡಿನಲ್ಲಿ ಶೇ.12, ಹರಿಯಾಣ ಶೇ.9.74, ಪಂಜಾಬ್ ಶೇ.8.12 ಮಣಿಪುರ ಶೇ.7.8 ಮತ್ತು ತೆಲಂಗಾಣ ಶೇ.7.55ರಷ್ಟು ಲಸಿಕೆಯನ್ನು ವ್ಯರ್ಥವಾಗಿ ಖರ್ಚು ಮಾಡಲಾಗಿದೆ ಎಂದು ಆರ್ ಟಿಐ ಮಾಹಿತಿಯಲ್ಲಿ ಗೊತ್ತಾಗಿದೆ.

ಭಾರತದಲ್ಲಿ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದಿನಿಂದ ಏಪ್ರಿಲ್ 11ರವರೆಗೂ ನೀಡಿರುವ 10 ಕೋಟಿ ಡೋಸ್ ಲಸಿಕೆಗಳ ಪೈಕಿ 44 ಲಕ್ಷ ಡೋಸ್ ಲಸಿಕೆ ವ್ಯರ್ಥವಾಗಿದೆ. ಕೊರೊನಾವೈರಸ್ ಲಸಿಕೆ ವಿತರಣೆ ವಿಚಾರ ಕೇಂದ್ರ ಸರ್ಕಾರ ಮತ್ತು ಕೆಲವು ರಾಜ್ಯ ಸರ್ಕಾರಗಳ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಬಿಜೆಪಿ ಆಡಳಿತವಿರುವ ಗುಜರಾತ್ ರೀತಿ ರಾಜ್ಯಗಳು ಕಡಿಮೆ ಜನಸಂಖ್ಯೆ ಹೊಂದಿದ್ದರೂ ಈ ರಾಜ್ಯಕ್ಕೆ ನೀಡಿದ್ದಲ್ಲಿ ಲಸಿಕೆಯನ್ನು ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ನೀಡಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಮಹಾರಾಷ್ಟ್ರ, ಪಂಜಾಬ್, ದೆಹಲಿ ಸರ್ಕಾರಗಳು ಕೇಂದ್ರದ ವಿರುದ್ಧ ಕಿಡಿ ಕಾರುತ್ತಿವೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ವಿದೇಶಗಳಲ್ಲಿ ಅನುಮೋದನೆ ಪಡೆದ ಲಸಿಕೆಗಳನ್ನು ಆಮದು ಮಾಡಿಕೊಳ್ಳುವುದಕ್ಕೆ ಕ್ರಮ ತೆಗದುಕೊಳ್ಳಲಾಗಿದೆ. ಇದರ ಜೊತೆಗೆ ಭಾರತದಲ್ಲಿ ಲಸಿಕೆ ಉತ್ಪಾದಿಸುತ್ತಿರುವ ಕಂಪನಿಗಳಿಗೆ ಕೇಂದ್ರ ಸರ್ಕಾರದಿಂದ 4500 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗುವುದು. ಸೇರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾಗೆ 3000 ಕೋಟಿ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಗೆ 1500 ಕೋಟಿ ರೂಪಾಯಿ ನೀಡಲಾಗುವುದು ಎಂದು ಏಪ್ರಿಲ್ 20ರಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ