ನವದೆಹಲಿ, : ಆಮ್ಲಜನಕವನ್ನು ಭಿಕ್ಷೆ ಬೇಡುತ್ತೀರೋ, ಸಾಲಕ್ಕೆ ತರುತ್ತೀರೋ, ಕದ್ದು ತರುತ್ತೀರೋ ತನ್ನಿ ಎಂದು ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ತಾಕೀತು ಮಾಡಿದೆ.
ದೇಶದ ಜನರು ಆಕ್ಸಿಜನ್ ಸಿಗದೆ ಸಾಯುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಿಜಕ್ಕೂ ಖೇದದ ಸಂಗತಿ. ಜನರ ಜೀವಕ್ಕೆ ಬೆಲೆ ಇಲ್ಲವೆ? ನೀವು ದೊಡ್ಡ ದುರಂತದತ್ತ ಸಾಗುತ್ತಿದ್ದೀರಿ ಎಂದು ನ್ಯಾಯಾಧೀಶರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಆಮ್ಲಜನಕವನ್ನು ಕೈಗಾರಿಕೆಗಳಿಗೆ ಬಳಸಲು ಅವಕಾಶ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ದೆಹಲಿ ಹೈಕೋರ್ಟ್ ವಾಸ್ತವ ಅರ್ಥ ಮಾಡಿಕೊಳ್ಳಲು ನಿಮಗೇನು ದಾಡಿ ಎಂದು ಕೇಂದ್ರ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.ಆಮ್ಲಜನಕ ಆಮದು ಮಾಡಿಕೊಳ್ಳಲು ಟೆಂಡರ್ ಕರೆದಿದ್ದೇನೆ ಎಂದು ನ್ಯಾಯಪೀಠಕ್ಕೆ ಕೇಂದ್ರ ಸರ್ಕಾರ ಹೇಳಿದ ಕೂಡಲೇ ತಾಳ್ಮೆ ಕಳೆದುಕೊಂಡ ನ್ಯಾಯಧೀಶರು, ನೀವು ನಿಮ್ಮದೇ ಆದ ರೀತಿಯಲ್ಲಿ ಸಿಹಿ ಸಮಯ ಕಳೆಯಿರಿ. ಜನರು ಸಾಯುತ್ತಾರೆ. ಆಸ್ಪತ್ರೆಗಳಿಗೆ ಆಮ್ಲಜನಕ ಒದಗಿಸುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ನೀವು ಏನಾದರೂ ಮಾಡಿಕೊಳ್ಳಿ ಜನರಿಗೆ ಸಂವಿಧಾನ ಕೊಟ್ಟಿರುವ ಬದುಕುವ ಹಕ್ಕನ್ನು ಕಾಪಾಡಿ ಎಂದು ನಿರ್ದೇಶನ ನೀಡಿದೆ.
ಮ್ಯಾಕ್ಸ್ ಗ್ರೂಪ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ರೇಖಾ ಪಲ್ಲಿ ಅವರ ನ್ಯಾಯಪೀಠವು, ಆಮ್ಲಜನಕದ ಪೂರೈಕೆಯನ್ನು ಖಾತ್ರಿಪಡಿಸುವ ಜವಾಬ್ದಾರಿ ಕೇಂದ್ರ ಸರ್ಕಾರದ ಹೆಗಲ ಮೇಲಿದೆ.ಅಗತ್ಯಬಿದ್ದರೆ ಉಕ್ಕು ಮತ್ತು ಪೆಟ್ರೋಲಿಯಂ ಸೇರಿದಂತೆ ಕೈಗಾರಿಕೆಗಳಿಗೆ ಪೂರೈಸುವ ಆಮ್ಲಜನಕವನ್ನು ವೈದ್ಯಕೀಯ ಬಳಕೆಗೆ ಬಳಸಿಕೊಳ್ಳುವಂತೆ ಎಂದು ನ್ಯಾಯಪೀಠ ಹೇಳಿದೆ.
ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಮ್ಲಜನಕದ ಕೊರತೆ ಉಂಟಾಗಿದೆ, ನಿತ್ಯ ಕೊರೊನಾ ಸೋಂಕಿತರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ.
Laxmi News 24×7