ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ಹೊಸ ಐಡಿಯಾ ಮಾಡಿದ್ದಾರೆ. ಸಂತೆಯಲ್ಲೇ ಕೋವಿಡ್ ಟೆಸ್ಟ್ ಮಾಡಲು ಪುರಸಭೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದು, ಶುಕ್ರವಾರ ಸಂತೆಗೆ ಬರುವ ಗ್ರಾಹಕರು ಹಾಗೂ ವ್ಯಾಪಾರಿಗಳ ಕೊರೊನಾ ಪರೀಕ್ಷೆಯನ್ನು ಸ್ಥಳದಲ್ಲೇ ಮಾಡುತ್ತಿದ್ದಾರೆ.
ವಾರದ ಸಂತೆ ಹಿನ್ನೆಲೆ ಸಂತೆಗೆ ನೂರಾರು ಜನ ಆಗಮಿಸುತ್ತಾರೆ, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಜಾರಿಗೆ ತರಲು ಅಧಿಕಾರಿಗಳು ಮುಂದಾಗಿದ್ದಾರೆ. ಸಂತೆಗೆ ಪ್ರವೇಶಕ್ಕೆ ಒಂದೇ ಮಾರ್ಗದಲ್ಲಿ ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಬಳಕೆಗೆ ಕ್ರಮ ಕೈಗೊಳ್ಳಲಾಗಿದೆ.

ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸಂತೆ ಮಾಡಿಕೊಂಡು ಸುರಕ್ಷಿತವಾಗಿ ತೆರಳಿದ್ದಾರೆ. ಮಾಸ್ಕ್ ಧರಿಸದೆ ಬಂದವರಿಗೆ ಸಂತೆಗೆ ಪ್ರವೇಶ ನೀಡದಂತೆ ಪೋಲಿಸರು ಕ್ರಮ ಕೈಗೊಂಡಿದ್ದು, ಪ್ರವೇಶ ದ್ವಾರದಲ್ಲಿ ತಡೆಯಲಾಗಿದೆ. ಈ ಮೂಲಕ ಸಂಕೇಶ್ವರ ಪುರಸಭೆ ಅಧಿಕಾರಿಗಳು ಕೋವಿಡ್ ನಿಯಂತ್ರಣಕ್ಕೆ ಕಟ್ಟು ನಿಟ್ಟಿನ ಕ್ರಮ ಜರುಗಿಸಿದ್ದಾರೆ.
Laxmi News 24×7