Breaking News

ಬೆಡ್ ಸಿಗದೆ ರೋಗಿ ಪರದಾಟ, ಸೋದರನ ಕಣ್ಣೀರು

Spread the love

ಬೆಂಗಳೂರು, ಏ.23- ಕೋವಿಡ್ ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರೂ ಬೆಡ್ ಸೌಕರ್ಯವಿಲ್ಲದೆ ಪರದಾಡುತ್ತಿರುವ ಘಟನೆಗಳು ನಗರದಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಲೇ ಇವೆ. ನಿನ್ನೆ ರಾತ್ರಿಯಿಂದಲೂ ಸೋಂಕಿರೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕುಟುಂಬಸ್ಥರು ಪರದಾಡುತ್ತ ರಾಜಾಜಿನಗರದ ಸುಗುಣ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಅವರಿಗೆ ಬೆಡ್ ಖಾಲಿ ಇಲ್ಲದೆ ದಾಖಲಿಸಿಕೊಂಡಿಲ್ಲದ್ದರಿಂದ ದಿಕ್ಕು ತೋಚದೆ ಕುಟುಂಬಸ್ಥರು ತಮ್ಮ ನೋವು ತೋಡಿಕೊಂಡರು.ಮುಂಬೈ ಮೂಲದ ಗೌತಮ್ ಜಯನಗರದ 3ನೆ ಬ್ಲಾಕ್‍ನಲ್ಲಿ ವಾಸವಿದ್ದಾರೆ. ಇವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ನಿನ್ನೆ ರಾತ್ರಿಯಿಂದಲೇ ನಗರದ ವಿವಿಧೆಡೆ ಆಸ್ಪತ್ರೆಗೆ ತೆರಳಿದ್ದಾರೆ. ಆದರೆ, ಎಲ್ಲೂ ದಾಖಲಿಸಿಕೊಂಡಿಲ್ಲ. ಇಂದು ಬೆಳಗ್ಗೆಯೂ ಆಸ್ಪತ್ರೆಗಳಿಗೆ ಸುತ್ತಾಡಿದ್ದ ಅವರಿಗೆ ದಿಕ್ಕು ತೋಚದಂತಾಗಿತ್ತು.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ