ಬೆಂಗಳೂರು: ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ನಿರ್ವಹಣೆಯ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿದರು.
ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದರು.

ಆರೋಗ್ಯ ಸಚಿವ ಡಾ. ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ಉಪಸ್ಥಿತರಿದ್ದು, ಈ ಸಭೆಯಲ್ಲಿ ಭಾಗವಹಿಸಿದ್ದರು.
Laxmi News 24×7