Breaking News

ಮಾಜಿ ಸಚಿವ ಆರ್​.ವಿ. ದೇಶಪಾಂಡೆಗೆ ಕೊರೊನಾ ಸೋಂಕು ದೃಢ

Spread the love

ಕಾರವಾರ: ಮಾಜಿ ಸಚಿವ ಆರ್​.ವಿ. ದೇಶಪಾಂಡೆಗೆ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ದೇಶಪಾಂಡೆ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ತಮಗೆ ಕೊರೊನಾ ಸೋಂಕು ಬಂದಿರುವ ಬಗ್ಗೆ ಪ್ರಕಟಿಸಿರುವ ದೇಶಪಾಂಡೆ ಅವರು ತನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೂ ಕೊರೊನಾ ತಗುಲಿದ್ದು ಇಂದು ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು, ಶಾಸಕ ಜಮೀರ್ ಅಹ್ಮದ್ ಖಾನ್‌ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಯಂಟಿಜೆನ್ ಟೆಸ್ಟ್ ವೇಳೆ ಜಮೀರ್ ಅಹ್ಮದ್ಗೆ ಕೊರೊನಾ ಸೋಂಕು ದೃಢವಾಗಿದ್ದು ಚಿಕ್ಕಪುಟ್ಟ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮನೆಯಲ್ಲೇ ಐಸೋಲೇಷನ್‌ನಲ್ಲಿರಲು ಜಮೀರ್ ಖಾನ್‌ ನಿರ್ಧರಿಸಿದ್ದಾರೆ. ಕಳೆದ ಬಾರಿಯೂ ಜಮೀರ್​ಗೆ ಕೊರೊನಾ ಸೋಂಕು ತಗುಲಿತ್ತು. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರ ಪತ್ನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜೊತೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ಪತ್ನಿಗೂ ಕೊರೊನಾ ದೃಢಪಟ್ಟಿದೆ. ಕಮಲ್ ಪಂತ್ ಮತ್ತು ಸೌಮೇಂದು ಮುಖರ್ಜಿಗೆ ಕೊರೊನಾ ಟೆಸ್ಟ್ ಮಾಡಿದ್ದು ಇಬ್ಬರ ಕೊವಿಡ್ ಟೆಸ್ಟ್ ವರದಿಯೂ ನೆಗೆಟಿವ್ ಬಂದಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ