Breaking News

ದಪ್ಪಗಿದ್ದ ನಟಿ ಸೋನಾಕ್ಷಿ ಸಿನ್ಹಾ ಈಗ ಹೇಗಾಗಿದ್ದಾರೆ ನೋಡಿ

Spread the love

ಬಾಡಿ ಶೇಮಿಂಗ್ ವಿಚಾರವಾಗಿ ಯಾವಾಗಲು ಟ್ರೋಲ್ ಆಗುತ್ತಿದ್ದ ನಟಿ ಸೋನಾಕ್ಷಿ ಸಿನ್ಹಾ. ದಪ್ಪಗೆ ಗುಂಡಗಿದ್ದ ಸೋನಾಕ್ಷಿ ತೂಕದ ವಿಚಾರವಾಗಿ ಆಗಾಗ ಸುದ್ದಿಯಲ್ಲಿರುತ್ತಿದ್ದರು. ನಟಿಯಮಣಿಯರು ಸ್ಲಿಮ್ ಅಂಡ್ ಫಿಟ್ ಆಗಿ ಇರುತ್ತಾರೆ. ಸದಾ ವರ್ಕೌಟ್ ಡಯಟ್ ಅಂತ ಹೆಚ್ಚು ತಲೆಕೆಡಿಸಿಕೊಂಡಿರುತ್ತಾರೆ. ಆದರೆ ಸೋನಾಕ್ಷಿ ದಪ್ಪಗೆ ಇದ್ದರು.

ಆದರೀಗ ಅಚ್ಚರಿಯ ರೀತಿಯಲ್ಲಿ ಸೋನಾಕ್ಷಿ ಬದಲಾಗಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡಿ ಸೋನಾಕ್ಷಿ ಈಗ ಬಳಕುವ ಬಳ್ಳಿಯಂತೆ ಆಗಿದ್ದಾರೆ. ಕೊರೊನಾದಿಂದ ಎಲ್ಲರೂ ಮನೆಯಲ್ಲೇ ಕಾಲಕಳೆಯುವಂತೆ ಆಗಿದೆ. ಈ ಸಮಯವನ್ನು ಉತ್ತಮವಾಗಿ ಬಳಸಿಕೊಂಡ ಸೋನಾಕ್ಷಿ ಅಚ್ಚರಿ ರೀತಿಯಲ್ಲಿ ಬದಲಾಗುವ ಮೂಲಕ ಅಭಿಮಾನಿಗಳಿಗೆ ದರ್ಶನ ನೀಡಿದ್ದಾರೆ.

 

ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಸೋನಾಕ್ಷಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸಿಕ್ಕಾಪಟ್ಟೆ ಸಣ್ಣ ಆಗಿರುವ ಸೋನಾಕ್ಷಿ ನೋಡಿ ಅಭಿಮಾನಿಗಳು ಅಚ್ಚರಿ ಪಟ್ಟು ಕಾಮೆಂಟ್ ಮಾಡುತ್ತಿದ್ದಾರೆ. 2010 ದಬಂಗ್ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಸೋನಾಕ್ಷಿ ಮೊದಲ ಸಿನಿಮಾದಲ್ಲೇ ಅಭಿಮಾನಿಗಳ ಹೃದಯ ಗೆದ್ದಿದ್ದರು.

ಫಸ್ಟ್ ಟೈಂ ನಾಯಕಿ ತುಟಿಗೆ ಕಿಸ್ ಮಾಡಿ ಅಭಿಮಾನಿಗಳಿಗೆ ಶಾಕ್ ಕೊಟ್ಟ ಸಲ್ಮಾನ್‌ಖಾನ್

ಚಿತ್ರರಂಗದಲ್ಲಿ 10 ವರ್ಷಗಳನ್ನು ಪೂರೈಸಿರುವ ಸೋನಾಕ್ಷಿ, ಕೊನೆಯದಾಗಿ 2019ರಲ್ಲಿ ದಬಂಗ್-3 ಮೂಲಕ ಕಾಣಿಸಿಕೊಂಡಿದ್ದರು. ಸದ್ಯ ಭುಜ್ ದಿ ಪ್ರೈಡ್ ಆಫ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದು, ಬಿಡುಗಡೆಗೆ ಕಾಯುತ್ತಿದ್ದಾರೆ. ಇತ್ತೀಚಿಗೆ ಅಪರೂಪಕ್ಕೊಂದು ಸಿನಿಮಾ ಮಾಡುತ್ತಿರುವ ಸೋನಾಕ್ಷಿ ಇನ್ಮುಂದೆಯಾದರೂ ಚಿತ್ರಗಳಲ್ಲಿ ಬ್ಯುಸಿಯಾಗುತ್ತಾರಾ ಎಂದು ಕಾದುನೋಡಬೇಕು.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ