Breaking News

ವಿದ್ಯಾರ್ಥಿಗಳನ್ನ ಹೊರಹಾಕಿದ ಹಾಸ್ಟೆಲ್; ಅನ್ನ-ನೀರಿಗಾಗಿ​ ವಿವಿ ಸ್ಟೂಡೆಂಟ್ಸ್ ಪರದಾಟ

Spread the love

ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ಯಡವಟ್ಟಿನಿಂದಾಗಿ ಹಾಸ್ಟೆಲ್​ನಲ್ಲಿರುವ ವಿದ್ಯಾರ್ಥಿಗಳು ಕಳೆದೆರಡು ದಿನಗಳಿಂದ ಅನ್ನ ನೀರಿಗಾಗಿ ಪರದಾಡುತ್ತಿರುವ ಘಟನೆ ಚಿತ್ರದುರ್ಗ ನಗರದ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್​ನಲ್ಲಿ ನಡೆದಿದೆ.

ಕೊರೊನಾ ಕಾರಣ ಹೇಳಿ ಆರೋಗ್ಯ ಇಲಾಖೆ ಏಕಾ ಏಕಿ ಹಾಸ್ಟೆಲ್​ ಬಂದ್​ ಮಾಡಿದ್ದು.. ಹಾಸ್ಟೆಲ್​ ಸಿಬ್ಬಂದಿ ವಿದ್ಯಾರ್ಥಿಗಳ ಬಟ್ಟೆ ಲಗೇಜನ್ನು ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ಬಿ. ಎಡ್​ ಎಕ್ಸಾಮ್​ ಹಿನ್ನಲೆ ಹಾಸ್ಟೆಲ್​ನಲ್ಲಿ ಪರೀಕ್ಷಾ ಸಿದ್ಧತೆ ನಡೆಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಹಾಸ್ಟೆಲ್​ ಹೊರಗಡೆ ಲಗೇಜ್​ ಹಿಡಿದುನಿಂತ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿ, ಇಲ್ಲವೇ ಹಾಸ್ಟೆಲ್​ ವ್ಯವಸ್ಥೆ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ. ಊಟ ಕೊಡಿ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ