Breaking News

ಕೊರೊನಾ ನಿಯಮ ಪಾಲನೆಗೆ ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ

Spread the love

ಬೆಳಗಾವಿ: ಕೊರೊನಾ ಎರಡನೇ ಅಲೆ ರಾಜ್ಯದಾದ್ಯಂತ ತೀವ್ರವಾಗಿದ್ದು, ರಾಜ್ಯ ಸರ್ಕಾರ ಸೋಂಕಿನ ನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನು ಜಾರಿ ಮಾಡಿದೆ. ಈ ನಡುವೆ ಜನರಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಬೆಳಗಾವಿ ಮಹಾನಗರ ಪಾಲಿಗೆ ಅಧಿಕಾರಿಗಳು ಒಂಟೆ ಏರಿ ವಿನೂತನ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಮಹಾನಗರ ಪಾಲಿಕೆ ಮಾರ್ಷಲ್​​ಗಳು ನಗರದ ಬೀದಿಗಳಲ್ಲಿ ಒಂಟಿ ಏರಿ ಸಂಚರಿಸುವ ಮೂಲಕ ಸಾರ್ವಜನಿಕರಿಗೆ ಮನವಿ ಮಾಡುತ್ತಿದ್ದು, ಕೊರೊನಾ ನಿಯಮ ಪಾಲನೆ ಮಾಡಿ, ಪ್ರಾಣ ಕಾಪಾಡಿ. ತಪ್ಪದೇ ಮಾಸ್ಕ್​​ ಧರಿಸಿ ಸಂಚಾರ ಮಾಡಿ, ಸಾಮಾಜಿಕ ಅಂತರ ಪಾಲನೆ ಮಾಡಿ ಎಂದು ಮೈಕ್​ ಹಿಡಿದು ಮಾಹಿತಿ ನೀಡುತ್ತಿದ್ದಾರೆ. ಪಾಲಿಕೆ ಅಧಿಕಾರಿಗಳ ಕಾರ್ಯ ಸಾರ್ವಜನಿಕರ ಗಮನ ಸೆಳೆಯಲು ಯಶಸ್ವಿಯಾಗಿದೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ