Breaking News

ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶ

Spread the love

ಚಿಕ್ಕೋಡಿ – ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು.

1987ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ, ಚಿಕ್ಕೋಡಿ ತಾಲೂಕು ಮಜಲಟ್ಟಿ ಗ್ರಾಮದಲ್ಲಿ ಜನಿಸಿದ್ದರು.  ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ ಕಾಶಿಯನ್ನಾಗಿ ಮಾಡುವಲ್ಲಿ ಹಗಲಿರುಳು ಎನ್ನದೇ ದಣಿಯದೆ ದುಡಿದು ಲಕ್ಷಾಂತರ ಬಡ ವಿದ್ಯಾರ್ಥಿಗಳ ಬಾಳಿನಲ್ಲಿ ವಿದ್ಯೆಯ ಕಿಡಿ ಹಚ್ಚಿದ್ದರು.

ಅವರಿಗೆ ಪತ್ನಿ,  4 ಗಂಡು, 2 ಹೆಣ್ಣು ಮಕ್ಕಳಿದ್ದಾರೆ.


Spread the love

About Laxminews 24x7

Check Also

ತುಂಬಿದ ಕೃಷ್ಣಾ ನದಿ: ಕುಡಚಿ ಉಗಾರ ಸೇತುವೆ ಮುಳುಗಡೆ, ಸಂಚಾರ ಬಂದ್

Spread the loveಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಕೃಷ್ಣಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ