Breaking News

ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿದ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಚರ್ಚೆ ನಡೆಸಿದ ಅವರು ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ ಆಕ್ಸಿಜನ್ ಸಿಲಿಂಡರ್ ಸಂಗ್ರಹಣೆ ಮಾಡಿ, ಹಂಚಿಕೆ ಮಾಡುವಂತೆ ಸೂಚಿಸಿದರು. ಆಕ್ಸಿಜನ್ ಪೂರೈಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲು ಕೂಡ ತಿಳಿಸಿದರು.

ಬೆಳಗಾವಿ ಆಕ್ಸಿಜನ್ ಪ್ಲಾಂಟ್ ನ ವೆಂಕಟೇಶ್ ಪಾಟೀಲ್, ಜಿಲ್ಲಾ ಪಂಚಾಯತಿ ಸದಸ್ಯ ಸಿದ್ದು ಸುಣಗಾರ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ