Home / ಜಿಲ್ಲೆ / ಬೆಂಗಳೂರು / ರಾಜ್ಯದ ಕೋವಿಡ್ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿಲ್ಲ: ಬಿ.ಎಸ್ . ಯಡಿಯೂರಪ್ಪ

ರಾಜ್ಯದ ಕೋವಿಡ್ ಪರಿಸ್ಥಿತಿ ನಮ್ಮ ನಿಯಂತ್ರಣದಲ್ಲಿಲ್ಲ: ಬಿ.ಎಸ್ . ಯಡಿಯೂರಪ್ಪ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯದಲ್ಲಿ ಬೆಡ್ , ಐಸಿಯು , ವೆಂಟಿಲೇಟರ್ ಬೆಡ್’ಗಳ ಕೊರತೆ ಕಂಡುಬಂದಿದ್ದು , ಪರಿಸ್ಥಿತಿ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಹೇಳಿದ್ದಾರೆ .

ಸಾವಿನ ಸಂಖ್ಯೆ ಹಾಗೂ ಸೋಂಕಿತ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹೆನ್ನೇಳೆ ಆರೋಗ್ಯ ಅಧಿಕಾರಿಗಳೊಂದಿಗೆ ಸಭೇನೆಡೆಸಿದ ಬಿಎಸ್’ವೈ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅದರೊಂದಿಗೆ, ಬೆಂಗಳೂರಿನಲ್ಲಿ ವೆಂಟಿಲೇಟರ್ ಹಾಸಿಗೆಗಳನ್ನು 10 ಪಟ್ಟು ಹೆಚ್ಚಳ ಮಾಡುವಂತೆ ಆದೇಶಿಸಿದ್ದಾರೆ .

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಈ ಬಗ್ಗೆ ಮಾತನಾಡಿ, ಪ್ರಸ್ತುತ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಅಧಿಕೃತವಾಗಿ ಕೇವಲ 117 ಐಸಿಯು ವೆಂಟಿಲೇಟರ್ ಹಾಸಿಗೆಗಳು ಇವೆ . ಶೇಕಡ 80 ರಷ್ಟು ಹಾಸಿಗೆ ಮೀಸಲಿಡುವಂತೆ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಲಾಗಿದೆ . ಎಲ್ಲಾ ನರ್ಸಿಂಗ್ ಹೋಂಗಳು ಮತ್ತು 30 ಹಾಸಿಗೆಗಳಿಗಿಂತ ಕಡಿಮೆ ಇರುವ ಆಸ್ಪತ್ರೆಗಳಲ್ಲಿ ಕೋವಿಡ್ ಇಲ್ಲದ ರೋಗಿಗಳಿಗೆ ಕಡ್ಡಾಯವಾಗಿ ಚಿಕಿತ್ಸೆ ನೀಡಬೇಕು . 30 ಕ್ಕಿಂತ ಹೆಚ್ಚು ಹಾಸಿಗೆ ಸಾಮರ್ಥ್ಯದ ಎಲ್ಲ ಆಸ್ಪತ್ರೆಗಳು ಶೇಕಡ 80 ರಷ್ಟು ಬೆಡ್ ಮತ್ತು ಐಸಿಯು ಸೌಲಭ್ಯವನ್ನು ರಾಜ್ಯಸರ್ಕಾರಕ್ಕೆ ನೀಡಬೇಕು ಎಂದು ಹೇಳಲಾಗಿದೆ ಎಂದರು.

ಅಷ್ಟೇ ಅಲ್ಲದೆ, ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 250 ಐಸಿಯು ಬೆಡ್ ಗಳನ್ನು ಸ್ಥಾಪಿಸಲಾಗುವುದು . ಮತ್ತೊಂದು ಹೊಸ ಕಟ್ಟಡದಲ್ಲಿ 250 ಐಸಿಯು ಬೆಡ್ ವ್ಯವಸ್ಥೆಗೊಳಿಸಲಾಗುವುದು ಎಂದು ಹೇಳಿದ್ದಾರೆ . ರಾಜ್ಯದಲ್ಲಿ ಪರಿಸ್ಥಿತಿ ಕೈಮೀರಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ . ಸೋಂಕಿತರ ಮೃತದೇಹದ ಅಂತ್ಯಸಂಸ್ಕಾರಕ್ಕಾಗಿ ಸ್ಮಶಾನಗಳ ಸಂಖ್ಯೆಯನ್ನು 12 ಕ್ಕೆ ಹೆಚ್ಚಿಸಲಾಗಿದ್ದು , ಬೆಂಗಳೂರು ಸುತ್ತಮುತ್ತ ಭೂಮಿ ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ