ಬೆಂಗಳೂರು : ಇಂದೂ ಕೂಡ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಮುಖದಲ್ಲಿಯೇ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 29438 ಹೊಸ ಕೇಸ್‍ಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 234483ಕ್ಕೆ ಏರಿಕೆಯಾಗಿದೆ.
ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಇಂದು 9058 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗೂ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 208 ಜನರು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ ರಾಜ್ಯದಲ್ಲಿ ಕೋವಿಡ್‍ಗೆ ಬಲಿಯಾದವರ ಸಂಖ್ಯೆ 14283ಕ್ಕೆ ಏರಿದೆ.
ಬೆಂಗಳೂರಿನಲ್ಲಿ ಅತೀ ಹೆಚ್ಚು :
ಇನ್ನು ಇಂದು ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆಯಲ್ಲಿ ರಾಜಧಾನಿ ಬೆಂಗಳೂರಿನದೇ ಸಿಂಹಪಾಲು ಇದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಬರೋಬ್ಬರಿ 17342 ಹೊಸ ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ ಬಳ್ಳಾರಿಯಲ್ಲಿ 731, ಹಾಸನದಲ್ಲಿ 823, ಕಲಬುರಗಿಯಲ್ಲಿ 791, ತುಮಕೂರಿನಲ್ಲಿ 1559, ಮಂಡ್ಯದಲ್ಲಿ 688 ಪ್ರಕರಣಗಳು ಪತ್ತೆಯಾಗಿವೆ.