Breaking News

ಭಾರತಕ್ಕೆ ಆಮ್ಲಜನಕ ಸಿಲಿಂಡರ್ ಪೂರೈಸಲು ನೆರವಾಗುವಂತೆ ಅಖ್ತರ್ ಮನವಿ

Spread the love

ನವದೆಹಲಿ: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟನ್ನು ಎದುರಿಸುತ್ತಿರುವ ಭಾರತಕ್ಕೆ ನೆರವಾಗುವಂತೆ ಪಾಕಿಸ್ತಾನ ಸರ್ಕಾರ ಹಾಗೂ ಅಭಿಮಾನಿಗಳಲ್ಲಿ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಮನವಿ ಮಾಡಿದ್ದಾರೆ.

ಏಪ್ರಿಲ್ 24 ಶನಿವಾರದಂದು ಭಾರತದಲ್ಲಿ ಗರಿಷ್ಠ 3,46,786 ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಇದು ದಿನವೊಂದರಲ್ಲೇ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. ಹಾಗೆಯೇ ಕಳೆದ 24 ತಾಸಿನಲ್ಲಿ 2,624 ಮಂದಿ ಮೃತಪಟ್ಟಿದ್ದಾರೆ.

‘ಈಗಿರುವ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನಿಭಾಯಿಸುವುದು ಯಾವುದೇ ಸರ್ಕಾರಕ್ಕೆ ಕಷ್ಟಕರವಾಗಿದೆ. ಈ ಕಷ್ಟದ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಹಾಯ ಮಾಡುವಂತೆ ನನ್ನ ಸರ್ಕಾರ ಮತ್ತು ಅಭಿಮಾನಿಗಳಲ್ಲಿ ವಿನಂತಿ ಮಾಡುತ್ತೇನೆ. ಭಾರತಕ್ಕೆ ಸಾಕಷ್ಟು ಆಮ್ಲಜನಕದ ಸಿಲಿಂಡರ್‌ಗಳ ಅಗತ್ಯವಿದೆ. ಆಮ್ಲಜನಕ ಸಿಲಿಂಡರ್‌ಗಳನ್ನು ಭಾರತಕ್ಕೆ ಪೂರೈಸಲು ಪ್ರತಿಯೊಬ್ಬರೂ ದೇಣಿಗೆ ನೀಡಲು ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

‘ಭಾರತ ನಿಜಕ್ಕೂ ಕೋವಿಡ್ ವಿರುದ್ಧ ಹೋರಾಡುತ್ತಿದೆ. ಜಾಗತಿಕ ಬೆಂಬಲ ಅತ್ಯಗತ್ಯವಾಗಿದೆ. ಆರೋಗ್ಯ ವ್ಯವಸ್ಥೆಯು ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ನಾವೆಲ್ಲರೂ ಜೊತೆಗಿದ್ದೇವೆ. ಪರಸ್ಪರ ನೆರವಾಗಬೇಕಿದೆ’ ಎಂದು ಅಖ್ತರ್ ವಿಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಫ್ರಾನ್ಸ್ ಕೈಟ್ ಉತ್ಸವದಲ್ಲಿ ಮಂಗಳೂರಿನ ಗಾಳಿಪಟ: ಫ್ರೆಂಚರ ನಾಡಿನಲ್ಲಿ ಹಾರಲಿದೆ ‘ಕುಡ್ಲದ ತೇರು

Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್​ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ