Breaking News

ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢ

Spread the love

ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಒಂದೇ ದಿನ ಕೊರೋನಾ ಸೋಂಕಿತರ ಸಂಖ್ಯೆ 300ರ ಗಡಿ ದಾಟಿದೆ. ಶನಿವಾರ ಒಟ್ಟೂ 313 ಜನರಿಗೆ ಸೋಂಕು ದೃಢಪಟ್ಟಿದೆ.

ಇದರಿಂದಾಗಿ 2ನೇ ಅಲೆಯಲ್ಲಿ 2ನೇ ಬಾರಿಗೆ ಮುನ್ನೂರರ ಗಡಿ ದಾಟಿದಂತಾಗಿದೆ.

ಬೆಳಗಾವಿ ತಾಲೂಕಿನಲ್ಲಿ 104, ಅಥಣಿ 21, ಬೈಲಹೊಂಗಲ 8, ಚಿಕ್ಕೋಡಿ 9, ಗೋಕಾಕ 39, ಹುಕ್ಕೋರಿ 10, ಖಾನಾಪುರ 25, ರಾಮದುರ್ಗ 19, ರಾಯಬಾಗ 41, ಸವದತ್ತಿ 16 ಹಾಗೂ ಇತರೆ 21 ಜನರಿಗೆ ಸೋಂಕು ದೃಢಪಟ್ಟಿದೆ.

ಬೆಳಗಾವಿ ತಾಲೂಕಿನ 67 ವರ್ಷದ ವ್ಯಕ್ತಿ ಬಿಮ್ಸ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಆಸ್ಪತ್ರೆಯಲ್ಲಿ 1858 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂಲಗಳ ಪ್ರಕಾರ ನಿಜವಾದ ಅಂಕಿಸಂಖ್ಯೆಗಳ ಇದಕ್ಕೂ ಎಷ್ಟೋಪಟ್ಟು ಹೆಚ್ಚಾಗಿದೆ. ಇಲ್ಲಿರುವುದು ಕೇವಲ ಅಧಿಕೃತವಾಗಿ ಲೆಕ್ಕಕ್ಕೆ ಸಿಕ್ಕಿರುವುದು.

ಬೆಳಗಾವಿ ನಗರದಲ್ಲೇ ನಿತ್ಯ 200ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಆದರೆ ದಾಖಲಾಗಿ ಚಿಕಿತ್ಸೆ ಪಡೆಯಬೇಕಾಗುತ್ತದೆ ಎನ್ನುವ ಕಾರಣಕ್ಕೆ ಎಷ್ಟೋ ಜನರು ಟೆಸ್ಟ್ ಮಾಡಿಸಿಕೊಳ್ಳುತ್ತಿಲ್ಲ ಎಂದು ಮೂಲಗಳು ಹೇಳಿವೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ