Breaking News
Home / ನವದೆಹಲಿ / ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಸಿಎಂ ಕೇಜ್ರಿವಾಲ್ ಆದೇಶ

ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಸಿಎಂ ಕೇಜ್ರಿವಾಲ್ ಆದೇಶ

Spread the love

ನವದೆಹಲಿ: ದೆಹಲಿಯಲ್ಲಿ ಕೊರೋನಾ ಹೆಚ್ಚುತ್ತಿದ್ದು, ಮತ್ತೊಂದೆಡೆ ಇಲ್ಲಿನ ಆಸ್ಪತ್ರೆಗಳನ್ನು ಆಮ್ಲಜನಕದ ಕೊರತೆೆ ಅತಿಯಾಗಿ ಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ಮೇ 3ರ ವರೆಗೂ ಲಾಕ್‌ಡೌನ್‌ ವಿಸ್ತರಿಸಿ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆದೇಶಿಸಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ‘ಆಮ್ಲಜನಕ ಪೂರೈಕೆಗೆ ಸಹಾಯವಾಗಲು ಪೋರ್ಟಲ್‌ ಆರಂಭಿಸಲಾಗಿದೆ. ಉತ್ಪಾದಕರು, ವಿತರಕರು ಹಾಗೂ ಆಸ್ಪತ್ರೆಗಳಿಂದ ಪ್ರಸ್ತುತ ಆಮ್ಲಜನಕ ಪೂರೈಕೆ ಮತ್ತು ಸಂಗ್ರಹದ ಮಾಹಿತಿ ಅಪ್‌ಡೇಟ್‌ ಆಗಲಿದೆ. ಪ್ರತಿ 2 ಗಂಟೆಗಳಿಗೊಮ್ಮೆ ಅಪ್‌ಡೇಟ್‌ ಮಾಡಲಾಗುತ್ತದೆ. ಕೇಂದ್ರ ಮತ್ತು ರಾಜ್ಯಗಳ ತಂಡಗಳು ಜೊತೆಯಾಗಿ ಕಾರ್ಯನಿರ್ವಹಿಸುತ್ತಿವೆ’ ಎಂದು ತಿಳಿಸಿದರು.

‘ಕಳೆದ ವಾರ ಕೋವಿಡ್‌ ಪ್ರಕರಣಗಳ ಸಂಖ್ಯೆ ಶೇ.36 ರಿಂದ 37ರಷ್ಟಿತ್ತು. ಲಾಕ್​ಡೌನ್​ ಬಳಿಕ ಇದೀಗ ಒಂದೆರಡು ದಿನಗಳಿಂದ ಪಾಸಿಟಿವ್​ ಪ್ರಮಾಣ ಇಳಿಮುಖವಾಗಿದೆ. ಇಂದು ಶೇ. 30ಕ್ಕಿಂತ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮತ್ತೆ ಆರು ದಿನಗಳ ಲಾಕ್‌ಡೌನ್‌ ಜಾರಿ ಮಾಡಲಾಗುತ್ತಿದೆ. ಮೇ 3 ರ ಬೆಳಿಗ್ಗೆ 5 ಗಂಟೆಯ ವರೆಗೂ ಲಾಕ್‌ಡೌನ್‌ ವಿಸ್ತರಿಸಲಾಗಿದೆ’ ಎಂದು ಘೋಷಿಸಿದರು.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ