Breaking News

ಪಲ್ಸ್ ಪೋಲಿಯೋ ಮಾದರಿಯಲ್ಲಿ ಉಚಿತವಾಗಿ ಕೊರೋನಾ ಲಸಿಕೆ ನೀಡಿ : ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್ ಡಿಕೆ ಒತ್ತಾಯ

Spread the love

ಬೆಂಗಳೂರು : ರಾಜ್ಯದ ಪ್ರತಿಯೊಬ್ಬರಿಗೂ ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಉಚಿತ ಕೊರೊನಾ ಲಸಿಕೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಹೇಳಿದ್ದಾರೆ.

ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್‌ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು‌ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಲ್ಲಿ ನನ್ನ ಕೋರಿಕೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ