Breaking News

ಸ್ವಂತ ಟಿವಿ ಚಾನೆಲ್ ಆರಂಭಿಸಿದ ‘ಕಾಂಗ್ರೆಸ್’

Spread the love

ದೇಶದ ಜನತೆಯನ್ನು ತಲುಪಲು ಕಾಂಗ್ರೆಸ್ ಪಕ್ಷ ಇದೀಗ ತನ್ನ ಸ್ವಂತ ಟಿವಿ ಚಾನೆಲ್ ಆರಂಭಿಸಿದೆ. ಐ.ಎನ್.ಸಿ. ಟಿವಿಗೆ ‘ರಾಷ್ಟ್ರೀಯ ಪಂಚಾಯತ್ ರಾಜ್ ದಿನ’ (ಏಪ್ರಿಲ್ 24)ವಾದ ಶನಿವಾರದಂದು ಚಾಲನೆ ನೀಡಲಾಗಿದೆ.

ದೇಶದಲ್ಲಿ ವಿವಿಧ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದ್ದರೂ ಸಹ ಇದು ಬಹಳಷ್ಟು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿಲ್ಲ. ಹೀಗಾಗಿ ನೈಜ ವಿಷಯವನ್ನು ಜನರಿಗೆ ತಲುಪಿಸಲು ಟಿವಿ ಚಾನೆಲ್ ಆರಂಭಿಸಿರುವುದಾಗಿ ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಈ ನೂತನ ಟಿವಿ ಚಾನೆಲ್ ದೇಶದ ಜನತೆಯ ಧ್ವನಿಯಾಗುವುದರ ಜೊತೆಗೆ ಕಡುಬಡವರ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ