Breaking News
Home / ರಾಜಕೀಯ / ಭಾರತ; 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣ ದಾಖಲು

ಭಾರತ; 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣ ದಾಖಲು

Spread the love

ನವದೆಹಲಿ, ಏಪ್ರಿಲ್ 25; ಭಾರತದಲ್ಲಿ 24 ಗಂಟೆಯಲ್ಲಿ 3,49,691 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 2,767 ಜನರು ಸಾವನ್ನಪ್ಪಿದ್ದು, 2,17,113 ಜನರು ಡಿಸ್ಚಾರ್ಜ್ ಆಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಭಾರತದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 1,69,60,172ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 26,82,751.

 

ದೇಶದಲ್ಲಿ ಇದುವರೆಗೂ 1,40,85,110 ಜನರು ಗುಣಮುಖಗೊಂಡಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 1,92,311. ಇದುವರೆಗೂ 14,09,16,417 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.

 

ಏಪ್ರಿಲ್ 24ರ ತನಕ 27,79,18,810 ಮಾದರಿಗಳ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದೆ. ಏಪ್ರಿಲ್ 24ರ ಶನಿವಾರ 17,19,588 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್‌ ಹೇಳಿದೆ.

ಯಾವ ರಾಜ್ಯದಲ್ಲಿ ಎಷ್ಟು? ಮಹಾರಾಷ್ಟ್ರದಲ್ಲಿ 67,160 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 42,28,836.

ಕೇರಳದಲ್ಲಿ 26,685 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 13,77,187ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 1,98,572.

ಕರ್ನಾಟಕದಲ್ಲಿ 29,438 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಪ್ರಕರಣಗಳ ಸಂಖ್ಯೆ 13,04,397ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2.34,483.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ