Home / ರಾಜಕೀಯ / ಉಗ್ರರ ಬಹುದೊಡ್ಡ ಸಂಚು ವಿಫಲ- 8 ಕೆಜಿ ತೂಕದ 2 ಐಇಡಿ ನಿಷ್ಕ್ರಿಯ

ಉಗ್ರರ ಬಹುದೊಡ್ಡ ಸಂಚು ವಿಫಲ- 8 ಕೆಜಿ ತೂಕದ 2 ಐಇಡಿ ನಿಷ್ಕ್ರಿಯ

Spread the love

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಉಗ್ರರ ಬಹುದೊಡ್ಡ ಸಂಚನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಶ್ಮೀರ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ 4 ಗ್ರೆನೆಡ್ ಲಾಂಚರ್, 3 ಚೀನಿ ಗ್ರೆನೆಡ್, ಎಕೆ-47 ಮತ್ತು ಒಂದು ಬಾಂಬ್ ವಶ ಪಡಿಸಿಕೊಂಡಿದ್ದಾರೆ.

ಪೂಂಛ್ ಜಿಲ್ಲೆಯ ಲೊರ್ನಾ ಇಲಾಖೆಯಲ್ಲಿ ಉಗ್ರರು ಬಚ್ಚಿಟ್ಟಿದ್ದ 8 ಕೆಜಿ ತೂಕದ ಎರಡು ಐಇಡಿ ಮತ್ತು ಎರಡು ಹ್ಯಾಂಡ್ ಗ್ರೆನೆಡ್ ಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. ಭಾನುವಾರ ಬೆಳಗ್ಗೆ ಲೊರ್ನಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಸರ್ಚ್ ಆಪರೇಷನ್ ಆರಂಭಿಸಿದ್ದರು. ಈ ವೇಳೆ ಸಿಬ್ಬಂದಿಗೆ ಉಗ್ರರು ಬಚ್ಚಿಟ್ಟಿದ್ದ ಸ್ಫೋಟಕ ವಸ್ತುಗಳು ಲಭ್ಯವಾಗಿವೆ. ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಜಂಟಿಯಾಗಿ ಈ ಆಪರೇಷನ್ ನಲ್ಲಿ ಭಾಗವಹಿಸಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಲೊರ್ನಾ ಪ್ರದೇಶದಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ.ಜಮ್ಮು-ಕಾಶ್ಮೀರದಲ್ಲಿ ಸೇನಾ ಉಗ್ರರ ವಿರುದ್ಧ ನಿರಂತರ ಕಾರ್ಯಚರಣೆ ನಡೆಸುತ್ತಿದೆ. ಈ ಕಾರ್ಯಚರಣೆಯಲ್ಲಿ 138 ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ರನ್ಬೀರಗಢದಲ್ಲಿ ಕೆಲ ಉಗ್ರರು ಅಡಗಿಕೊಂಡಿದ್ದು, ದೊಡ್ಡ ಮಟ್ಟದ ಸಂಚು ರೂಪಿಸಿರುವ ಮಾಹಿತಿ ಸೇನೆಗೆ ಲಭ್ಯವಾಗಿತ್ತು. ಈ ಮಾಹಿತಿ ಆಧಾರದ ಮೇಲೆ ಸಿಆರ್‍ಪಿಎಫ್ ಮತ್ತು ಪೊಲೀಸರ ತಂಡ ಜಂಟಿ ಕಾರ್ಯಚರಣೆಗೆ ಇಳಿದಿತ್ತು. ರನ್ಬೀರಗಢದಲ್ಲಿಯ ಪ್ರತಿ ಮನೆಯನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಈ ವೇಳೆ ಒಂದು ಮನೆಯಲ್ಲಿ ಅಡಗಿದ್ದ ಉಗ್ರರ ತಂಡ ಗುಂಡಿನ ದಾಳಿ ನಡೆಸಿದೆ. ಸೇನೆಯ ಸಹ ಪ್ರತ್ಯತ್ತುರವಾಗಿ ಗುಂಡಿನ ಉತ್ತರ ನೀಡಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ