Breaking News
Home / ರಾಜ್ಯ / ಗದಗ: ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

ಗದಗ: ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಆಕಸ್ಮಿಕ ಬೆಂಕಿ: ತಪ್ಪಿದ ಅನಾಹುತ

Spread the love

ಗದಗ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ನಗರದ ಬ್ಯಾಂಕ್ ರೋಡ್‌ನಲ್ಲಿರುವ ಭಾರತ್ ಗ್ಯಾಸ್ ಏಜೆನ್ಸಿಯಲ್ಲಿ ಬೆಂಕಿ ಹೊತ್ತಿಕೊಂಡಿರುವ ಘಟನೆ ರವಿವಾರ ನಡೆದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ರವಿವಾರ ರಾತ್ರಿ 9.15ರ ಸುಮಾರಿಗೆ ಭಾರತ್ ಗ್ಯಾಸ್ ಏಜೆನ್ಸಿ ಸಮೀಪದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸ್ಥಳೀಯರು, ಹೆಸ್ಕಾಂ ಗೆ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಹೆಸ್ಕಾಂ ಸಿಬ್ಬಂದಿ ಸರಿಪಡಿಸಲು ಪ್ರಯತ್ನಿಸಿದರು. ಈ ವೇಳೆ ಆಕಸ್ಮಿಕವಾಗಿ ಗ್ಯಾಸ್ ಏಜೆನ್ಸಿ ಕಚೇರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ.

ಕ್ಷಣಮಾತ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಏಜೆನ್ಸಿಯಲ್ಲಿದ್ದ 7 ಗ್ಯಾಸ್ ಸಿಲಿಂಡರ್‌ಗಳ ಪೈಕಿ ಒಂದು ಸ್ಫೋಟ್‌ಗೊಂಡಿದೆ. ಪರಿಣಾಮ ಏಜೆನ್ಸಿ ಗಾಜು ಪುಡಿಪುಡಿಯಾಗಿದ್ದು, ಬೆಂಕಿ ಹೊತ್ತಿ ಉರಿದಿದೆ.

 

ಈ ನಡುವೆ ಗ್ಯಾಸ್ ಏಜೆನ್ಸಿ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಭಯ ಭೀತರಾಗಿದ್ದ ಹಿಂಭಾಗದ ಜನರು ಮನೆಯಿಂದ ಹೊರಗೋಡಿದ್ದರು. ಸಂತೋಷ ಕಮಿತ್ಕರ್, ನಾಗರಾಜ ಕಮಿತ್ಕರ್ ಸೇರಿದಂತೆ 7 ಕುಟುಂಬಸ್ಥರು ಮನೆ ತೊರೆದು, ಮಕ್ಕಳು ಮರಿಗಳೊಂದಿಗೆ ಬಹು ದೂರ ಓಡಿದ್ದಾರೆ, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಸ್ಥಳೀಯರಾದ ಅನ್ವರ್ ಶಿರಹಟ್ಟಿ, ಉಮರ್ ಫಾರೂಕ್ ಹುಬ್ಬಳ್ಳಿ ಹಾಗೂ ರಫೀಕ್ ಅಬ್ಬಿಗೇರಿ ಸೇರಿದಂತೆ ಮತ್ತಿತರರು ಬೆಂಕಿ ನಂದಿಸುವ ಕಾರ್ಯಕ್ಕೆ ಸಾಥ್ ನೀಡಿದರು.

 

Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ