Breaking News

“ಯಾರು ಎಷ್ಟೇ ಟೀಕೆ ಮಾಡಿದರೂ ನಾನೆಂದೂ ದ್ವೇಷ ರಾಜಕಾರಣ ಮಾಡಲ್ಲ” : ಸಿಎಂ ಬಿಎಸ್ವೈ

Spread the love

ಬೆಂಗಳೂರು,ಜು.27- ನನ್ನನ್ನು ಎಷ್ಟೇ ಟೀಕೆ ಮಾಡಿದರೂ ನಾನು ಯಾರ ಬಗ್ಗೆಯೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ, ಸರ್ಕಾರದ ಪ್ರಗತಿ ವರದಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ನನ್ನನ್ನು ಎಷ್ಟೇ ಟೀಕೆ ಮಾಡಲಿ. ಇದರ ಬಗ್ಗೆ ಗಮನಹರಿಸುವುದಿಲ್ಲ. ನಾನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ತೀರ್ಮಾನಿಸಿದ್ದೇನೆ. ಪ್ರತಿಪಕ್ಷಗಳು ಎಷ್ಟೇ ಟೀಕೆ ಮಾಡಿದ್ದರೂ ಎಂದಿಗೂ ದ್ವೇಷ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿಪಕ್ಷಗಳು ಸರ್ಕಾರಕ್ಕೆ ಯಾವುದೇ ರೀತಿಯ ಸಲಹೆ ಸಹಕಾರ ಕೊಟ್ಟರೆ ಅದನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸುತ್ತೇನೆ. ಟೀಕೆ ಮಾಡಿದರೂ ಸಕಾರಾತ್ಮಕವಾಗಿ ತೆಗೆದುಕೊಳ್ಳುವೆ ಎಂದರು.

ನನಗೆ ಕರ್ನಾಟಕವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕೆಂಬ ಮಹದಾಸೆಯಿದೆ. ಅದಕ್ಕೆ ಎಲ್ಲರ ಸಹಕಾರವನ್ನು ಪಡೆಯಲಿದ್ದೇನೆ.

ದೇಶದಲ್ಲಿ ಕರ್ನಾಟಕ ಎಲ್ಲ ಕ್ಷೇತ್ರಗಳಲ್ಲೂ ಮಾದರಿ ರಾಜ್ಯವಾಗಬೇಕೆಂಬ ಗುರಿ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಎಲ್ಲರು ಸಹಕರಿಸಬೇಕು ಎಂದು ಮನವಿ ಮಾಡಿದರು.


Spread the love

About Laxminews 24x7

Check Also

ಬೆಂಗಳೂರಲ್ಲಿ ಮುಂಬೈ ಮಾದರಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ: ಡಿಸಿಎಂ ಸೂಚನೆ

Spread the love ಬೆಂಗಳೂರು: ಮುಂಬೈ ಮಾದರಿಯಲ್ಲಿ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜಿಬಿಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ