ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮೇ.2 ರ ಚುನಾವಣಾ ಫಲಿತಾಂಶ ದಿನದಂದು ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿ ಚುನಾವಣಾ ಆಯೋಗ ಮಹತ್ವದ ನಿರ್ಧಾರ ಆದೇಶ ಹೊರಡಿಸಿದೆ.
ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ರಾಜಕೀಯ ಪಕ್ಷಗಳ ವಿಜಯೋತ್ಸವಕ್ಕೆ ನಿಷೇಧ ಹೇರಿದ್ದು, ಚುನಾವಣೆ ಫಲಿತಾಂಶದ ಬಳಿಕ ವಿಜೇತ ಅಭ್ಯರ್ಥಿಯ ಜೊತೆಗೆ ಇಬ್ಬರಿಗಿಂತ ಹೆಚ್ಚು ಮಂದಿ ಇರಲು ಅನುಮತಿ ಇಲ್ಲ. ಅಭ್ಯರ್ಥಿಯು ಅಧಿಕೃತ ಪ್ರತಿನಿಧಿ ಚುನಾವಣಾ ಪ್ರಮಾಣಪತ್ರ ಪಡೆಯಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿದೆ.
ಇನ್ನು ಮೇ. 2 ರಂದು ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದ್ದು, ಮೇ. 2 ರಂದು ಚುನಾವಣಾ ವಿಜಯೋತ್ಸವನ್ನು ನಿಷೇಧಿಸಲಾಗಿದೆ.
Laxmi News 24×7