Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯದಲ್ಲಿಂದು ಕೋವಿಡ್ ಮಹಾಸ್ಫೋಟ : 31830 ಹೊಸ ಪ್ರಕರಣ,180 ಜನ ಸಾವು

ರಾಜ್ಯದಲ್ಲಿಂದು ಕೋವಿಡ್ ಮಹಾಸ್ಫೋಟ : 31830 ಹೊಸ ಪ್ರಕರಣ,180 ಜನ ಸಾವು

Spread the love

ಬೆಂಗಳೂರು: ವಾರಾಂತ್ಯದ ಕರ್ಫ್ಯೂ ತೆರೆವಾದ ಬೆನ್ನಲ್ಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಕಳೆದ 24 ಗಂಟೆಗಳ( ಸೋಮವಾರ) ಅವಧಿಯಲ್ಲಿ ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮಿತಿ ಮೀರಿ ಹೆಚ್ಚುತ್ತಿರುವ ಕೋವಿಡ್‍ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಳೆದ ಶುಕ್ರವಾರ ರಾತ್ರಿಯಿಂದ ಸೋಮವಾರದ ಮುಂಜಾನೆ ವರೆಗೆ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಭಾನುವಾರ ದಾಖಲಾದ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖ ಖಂಡಿತ್ತು. ಆದರೆ, ಸೋಮವಾರ ಕರ್ಫ್ಯೂ ತೆರವುಗೊಳಿಸುತ್ತಿದ್ದಂತೆ ಕೋವಿಡ್ ಪ್ರಕರಣಗಳ ಸಂಖ್ಯೆ 31830ಕ್ಕೆ ಏರಿಕೆಯಾಗಿದೆ.

ಇಂದು ಸಂಜೆ( ಏ.27, ಮಂಗಳವಾರ) ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ( ದಿನಾಂಕ:26.04.2021,00:00 ರಿಂದ 23:59 ರವರೆಗೆ) ಬರೋಬ್ಬರಿ 31830 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 301899ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ 180 ಜನರು ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಂಗಳೂರು ಟಾಪ್ :

ಇನ್ನು ಎಂದಿನಂತೆ ರಾಜ್ಯ ರಾಜಧಾನಿ ಬೆಂಗಳೂರು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಿಲಿಕಾನ್ ಸಿಟಿಯಲ್ಲಿ 17550 ಜನರಿಗೆ ಕೋವಿಡ್ ತಗುಲಿರುವುದು ವರದಿಯಾಗಿದೆ. ಇನ್ನುಳಿದಂತೆ ಮೈಸೂರು-2042, ತುಮಕೂರು-1196, ಬಳ್ಳಾರಿ-907 ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ