Breaking News

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ ಮದ್ಯ ವ್ಯಸನಿಯಾದ ಭೀಮಪ್ಪ, ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಿದ್ಯಾನಗರ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಧಿಕರಿಗೆ ಹಸ್ತಾಂತರ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

Spread the love

ಹುಬ್ಬಳ್ಳಿ: ಕೊರೊನಾ ಸೋಂಕಿತ ಕಾನ್ಸರ್ ರೋಗಿಯೊಬ್ಬ ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಿಕ್ಕಬಾರ ಗ್ರಾಮದ ಭೀಮಪ್ಪ ಯಲ್ಲಪ್ಪ ಕಮತರ ಅವರು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಕುತ್ತಿಗೆ ಕಾನ್ಸರ್ ರೋಗದಿಂದ ಬಳಲುತ್ತಿದ್ದ ಸೋಂಕಿತನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ನಂತರ ಇವರನ್ನು ಕಾನ್ಸರ್ ವಾರ್ಡ್ ನಲ್ಲೇ ಕೋವಿಡ್ ವಿಭಾಗಕ್ಕೆ ಶಿಫ್ಟ್ ಮಾಡಲಾಗಿತ್ತು.ಸ

ಮದ್ಯ ವ್ಯಸನಿಯಾದ ಭೀಮಪ್ಪ, ಕುಡಿಯಲು ಮದ್ಯ ಸಿಗದ ಕಾರಣ ಜೊತೆಗೆ ತಮಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಮನನೊಂದು ಕೋವಿಡ್ ವಾರ್ಡ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ವಿದ್ಯಾನಗರ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಧಿಕರಿಗೆ ಹಸ್ತಾಂತರ ಮಾಡಿದ್ದು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ