Breaking News

ಒತ್ತಡ: ವೈದ್ಯನಿಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿದ ನರ್ಸ್; ವಿಡಿಯೋ ವೈರಲ್

Spread the love

ರಾಮ್ ಪುರ: ನರ್ಸ್ ಒಬ್ಬರು ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ರಾಮ್ ಪುರ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು ಮರಣ ಪ್ರಮಾಣ ಪತ್ರದ ವಿಷಯವಾಗಿ ವಾಗ್ವಾದ ನಡೆದ ಪರಿಣಾಮವಾಗಿ ನರ್ಸ್ ವೈದ್ಯರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ವರದಿಗಳ ಪ್ರಕಾರ ಅದಾಗಲೇ ರೋಗಿಗಳಿಂದ ತುಂಬಿದ್ದ ವೈದ್ಯರಿದ್ದ ಕೋಠಡಿಗೆ ಬಂದ ನರ್ಸ್ ಮೃತರೋರ್ವರ ಮರಣ ಪ್ರಮಾಣಪತ್ರ ನೀಡುವಂತೆ ಕೇಳಿದರು.

ತಕ್ಷಣವೇ ಇಬ್ಬರ ನಡುವೆ ವಾಗ್ವಾದ ಪ್ರಾರಂಭವಾಯಿತು. ನರ್ಸ್ ವೈದ್ಯರ ಕಪಾಳಕ್ಕೆ ಹೊಡೆದಿದ್ದು, ವೈದ್ಯರೂ ನರ್ಸ್ ಗೆ ಹೊಡೆದಿದ್ದಾರೆ. ಈ ಘಟನಾವಳಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗತೊಡಗಿದೆ.

ಸೋಮವಾರದಂದು ಈ ಘಟನೆ ನಡೆದರೂ ಈ ವರೆಗೂ ರಾಮ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಆದರೂ ಜಿಲ್ಲಾ ನ್ಯಾಯಾಧಿಕಾರಿಗಳಾದ ರವೀಂದ್ರ ಕುಮಾರ್ ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. “ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳು ಅತಿಯಾದ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಈ ರೀತಿಯ ಘಟನೆ ನಡೆದಿದೆ” ಎಂದು ಆಸ್ಪತ್ರೆಯ ಅಧಿಕಾರಿಗಳು ಹೇಳಿದ್ದಾರೆ.

https://twitter.com/followme000066/status/1387081076997181445?ref_src=twsrc%5Etfw%7Ctwcamp%5Etweetembed%7Ctwterm%5E1387081076997181445%7Ctwgr%5E%7Ctwcon%5Es1_c10&ref_url=https%3A%2F%2Fwww.kannadaprabha.com%2Fnation%2F2021%2Fapr%2F28%2Futtar-pradesh-nurse-slaps-doctor-officials-say-they-are-overworked-444735.html


Spread the love

About Laxminews 24x7

Check Also

ದೇವೇಗೌಡರ ಆರೋಗ್ಯ ಚೇತರಿಕೆಗಾಗಿ 108 ತೆಂಗಿನಕಾಯಿ ಒಡೆದು ಹರಕೆ ಹೊತ್ತ ಜೆಡಿಎಸ್ ಕಾರ್ಯಕರ್ತರು

Spread the love ಚಿಕ್ಕಬಳ್ಳಾಪುರ: ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ