ಪಣಜಿ: ಕೊರೊನಾ ಸೋಂಕು ತಡೆಯಲು ಗೋವಾ ರಾಜ್ಯ ಸರ್ಕಾರ ಗುರುವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆ ವರೆಗೆ ಮೂರು ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಲಾಕ್‍ಡೌನ್ ಸಂದರ್ಭದಲ್ಲಿ ಅಗತ್ಯ ಸೇವೆಗಳು ಕೈಗಾರಿಕೆಗಳನ್ನು ಸ್ಥಗಿತಗೊಳಿಸಲಾಗುವುದಿಲ್ಲ. ಸೋಂಕಿನ ಸರಪಳಿಯನ್ನು ಕತ್ತರಿಸಲು ಗುರುವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆಯ ವರೆಗೆ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಅಗತ್ಯ ಸೇವೆಗಳು ಎಂದಿನಂತೆಯೇ ಇರಲಿವೆ ಎಂದರು.
ಆದರೆ ವಾರದ ಸಂತೆ ನಡೆಸಲು ಅವಕಾಶ ನೀಡಲಾಗುವುದಿಲ್ಲ. ಕ್ಯಾಸಿನೊಗಳು ಬಂದ್ ಆಗಿರಲಿದೆ. ಕೈಗಾರಿಕಾ ಕೆಲಸಗಳು ಎಂದಿನಂತೆಯೇ ಮುಂದುವರೆಯಲಿದೆ. ಸೋಮವಾರ ಲಾಕ್‍ಡೌನ್ ತೆರವುಗೊಳಿಸಲಾಗುವುದು ಮತ್ತು ವ್ಯಾಪಾರ ವಹಿವಾಟು ಎಂದಿನಂತೆಯೇ ನಡೆಯಲಿದೆ. ಜನರು ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದರು.
ಲಾಕ್‍ಡೌನ್ ಸಂದರ್ಭದಲ್ಲಿ ವ್ಯಾಕ್ಸಿನೇಶನ್ ಕೇಂದ್ರಗಳು ಕಾರ್ಯನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
Laxmi News 24×7