ಬೆಂಗಳೂರು: ರಾಜ್ಯಾದ್ಯಂತ ಗಾರ್ಮೆಂಟ್ಸ್ ನಲ್ಲಿ ಶೇ.50ರಷ್ಟು ನೌಕರರು ಕೆಲಸ ಮಾಡುವುದಕ್ಕೆ ರಾಜ್ಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿದೆ. ಇದೇ ವೇಳೆ ಆದೇಶದಲ್ಲಿ ಸೂಕ್ತ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿ ಎಲ್ಲಾ ರೀತಿ ಕ್ರಮಗಳನ್ನು ತೆಗೆದುಕೊಂಡು ಬೆಂಗಳೂರು ನಗರದಲ್ಲಿರುವ ಗಾರ್ಮೆಂಟ್ಸ್ ಶೇ.50ರಷ್ಟು ನೌಕರರು ಕೆಲಸ ಮಾಡಲು ಅವಕಾಶ ನೀಡಲಾಗಿದೆ ಅಂತ ಹೇಳಲಾಗಿದೆ.
ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಕೂಡ ಹೊಂದಿರಬೇಕು ಅಂತ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಗಾರ್ಮೆಂಟ್ಸ್ ಕೆಲಸಕ್ಕೆ ತೆರಳುವವರು ಸೂಕ್ತವಾದ ದಾಖಲೆಗಳನ್ನು ಹೊಂದಿರ ತಕ್ಕದ್ದು.

Laxmi News 24×7