Breaking News

45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದ ಜಿಲ್ಲಾಧಿಕಾರಿ ಡಾ.ಕೆ.‌ಹರೀಶ್ ಕುಮಾರ್

Spread the love

ಬೆಳಗಾವಿ: ಕೋವಿಡ್ -19 ಸಾಕ್ರಾಂಮಿಕ ರೋಗವನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಜನತಾ ಕಫ್ಯೂ೯ ಸಂದರ್ಭದಲ್ಲಿಯೂ ಸರ್ಕಾರದ ನಿರ್ದೇಶನದಂತೆ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.‌ಹರೀಶ್ ಕುಮಾರ್ ತಿಳಿಸಿದ್ದಾರೆ.

ನಗರ ಪ್ರದೇಶಗಳಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಕೋವಿಡ್-19 ಲಸಿಕೆ ಪಡೆದುಕೊಳ್ಳಲು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು ಮತ್ತು ಲಸಿಕಾ ಕೇಂದ್ರಗಳಿಗೆ ತೆರಳುವಾಗ ಭಾವಚಿತ್ರ ಹೊಂದಿದ ಅಧಿಕೃತ ಗುರುತಿನ ಚೀಟಿ ಹಾಗೂ ಆನ್ ಲೈನ್ ನೇಮಕಾತಿಯ ದಾಖಲೆಯನ್ನು ತರುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ವಿಧಾನ:

ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಕೇಂದ್ರ ಗಳು ಸೇರಿದಂತೆ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಲಸಿಕಾಕರಣಕ್ಕಾಗಿ ಕ್ರಮ ಕೈಗೊಳ್ಳಲಾಗುವುದು.

ಅಲ್ಲಿನ ಅನುಕೂಲವಾಗುವಂತೆ ಜನಸಂದಣಿಯನ್ನು ತಪ್ಪಿಸಲು ಕ್ಷೇತ್ರ ಕಾರ್ಯಕರ್ತರು ಉಪಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದಿಷ್ಟ ಸಮಯದ ಸ್ಲಾಟ್ ಗಳೊಂದಿಗೆ ಲಸಿಕೆ‌ ನೀಡಲು ಅನುಕೂಲಕರ ಸಮಂಜಸ ಗುಂಪುಗಳನ್ನು ಸಜ್ಜುಗೊಳಿಸಲಾಗಿದೆ‌.

ಫಲಾನುಭವಿಗಳನ್ನು ಸಜ್ಜುಗೊಳಿಸಲು ಗುರುತಿಸಲಾದ ಸ್ವಯಂ ಸೇವಕರಿಗೆ ದೃಢೀಕರಣಕ್ಕಾಗಿ ಗುರುತಿನ ಚೀಟಿ ಅಥವಾ ಪಾಸ್ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.‌ ಹರೀಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕೋವಿಡ್-19 ಲಸಿಕಾಕರಣಕ್ಕೆ ವ್ಯವಸ್ಥೆಗಳು:

ಆಶಾ, ಅಂಗನವಾಡಿ ಕಾರ್ಯಕರ್ತರು ಅಥವಾ ಅಧಿಕೃತ ಸ್ವಯಂ ಸೇವಕರು ಲಸಿಕೆದಾರರಿಗೆ ಲಸಿಕಾಕರಣದ ಚೀಟಿ/ ಪಾಸ್ ನೀಡುತ್ತಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ವತಿಯಿಂದ ಫಲಾನುಭವಿಗಳನ್ನು ವ್ಯಾಕ್ಸಿನೇಷನ್‌ ತಾಣಗಳಿಗೆ ಸಜ್ಜುಗೊಳಿಸಲು ಕೋವಿಡ್ -19 ಲಸಿಕೆ ವಾಹನಗಳ ವ್ಯವಸ್ಥೆ ಮಾಡಲಾಗುವುದು ಮತ್ತು ವಾಹನಗಳಿಗೆ ಮಾನ್ಯ ಪಾಸ್, ಸ್ಟಿಕ್ಕರ್ ಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.‌ ಹರೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಆರೋಗ್ಯ ಕೇಂದ್ರಗಳ ಲಸಿಕೆ ನೀಡುವ ಸಾಮಥ್ಯ೯ ದ ಆಧಾರದ ಮೇಲೆ ಯಾವುದೇ ಸಮಯದಲ್ಲಿ ಪ್ರತಿ ಸೈಟ್ ಗೆ 5 ರಿಂದ 10 ಅಥವಾ ಇನ್ನೂ ಹೆಚ್ಚಿನ ಫಲಾನುಭವಿಗಳಿಗೆ ಲಸಿಕೆ ಪಡೆಯಲು ಅವಕಾಶ ನೀಡಲಾಗುವುದು.

ಲಸಿಕಾಕರಣಕ್ಕಾಗಿ ನಿರ್ದಿಷ್ಟ ಕ್ರಿಯಾ ಯೋಜನೆಯನ್ನು ಸ್ಥಾಪಿಸಿ ಪೊಲೀಸ್ ಸಿಬ್ಬಂದಿಗೆ ನೀಡಿ ಜನರ ಸುಗಮ‌ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು
ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅರ್ಹ ಫಲಾನುಭವಿಗಳು ವಯಸ್ಸಿನ ದೃಢೀಕರಣಕ್ಕಾಗಿ ತಮ್ಮೊಂದಿಗೆ ಆಧಾರ್ ಕಾಡ್೯ ಒಯ್ಯುವುದು ಕಡ್ಡಾಯವಾಗಿರುತ್ತದೆ.

ಜನದಟ್ಟಣೆಯನ್ನು ನಿಯಂತ್ರಿಸಲು ಮತ್ತು ಶಿಸ್ತು ಕಾಪಾಡಲು ಪೊಲೀಸ್/ಎನ್ ಎಸ್ ಎಸ್/ ಎನ್ ಸಿ ಸಿ ಅಧಿಕಾರಿಗಳನ್ನು ಲಸಿಕಾ ಕೇಂದ್ರಕ್ಕೆ ನಿಯೋಜನೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.‌ ಹರೀಶ್ ಕುಮಾರ್ ತಿಳಿಸಿದ್ದಾರೆ.

ಲಸಿಕಾಕರಣ ಕೇಂದ್ರಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ :

ಲಸಿಕಾಕರಣ ಕೇಂದ್ರಗಳಿಗೆ ಪ್ರತಿ ಫಲಾನುಭವಿಯೊಂದಿಗೆ ಒಬ್ಬ ವ್ಯಕ್ತಿಗೆ ಮಾತ್ರ ಅವಕಾಶವಿರುತ್ತದೆ. ಎಲ್ಲಾ ಕೋವಿಡ್-19 ಲಸಿಕಾ ಕೇಂದ್ರಗಳಲ್ಲಿ ಮಾಸ್ಕ್ ಧರಿಸುವಿಕೆ, ಅಂತರ ಕಾಯ್ದುಕೊಳ್ಳುವಿಕೆ ಹಾಗೂ ಕೈಗಳ ಸ್ವಚ್ಚತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.

ಲಸಿಕೆಯ ಎರಡನೇ ಡೋಸ್ ಪಡೆಯಬೇಕಾದ ಎಲ್ಲಾ ಫಲಾನುಭವಿಗಳು ತಾವು ಮೊದಲನೇ ಡೋಸ್ ಪಡೆದ ಅಧಿಕೃತ ಮಾಹಿತಿಯನ್ನು ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.‌ ಹರೀಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ