ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಯಲಕ್ಕೂ ಕೊರೊನಾ ಸೋಂಕು ವಕ್ಕರಿಸಿದ್ದು, ವಿಶ್ವವಿದ್ಯಾಯಲ ಆವರಣದಲ್ಲಿರುವ ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಸೋಂಕು ದೃಢವಾಗಿದೆ.
ಸಿಬ್ಬಂದಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಸಿಂಡಿಕೇಟ್ ಬ್ಯಾಂಕ್ ಸೀಲ್ ಡೌನ್ ಮಾಡಲಾಗಿದೆ. ನೌಕರನಿಗೆ ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿ ಪಾಸಿಟಿವ್ ಬಂದಿದೆ.
Laxmi News 24×7