Breaking News
Home / Uncategorized / ಬೆಂಗಳೂರಿನಿಂದ ಬಂದರೆ ಈ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

ಬೆಂಗಳೂರಿನಿಂದ ಬಂದರೆ ಈ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯ

Spread the love

ಧಾರವಾಡ, ಏಪ್ರಿಲ್ 29; ಕೋವಿಡ್ 2ನೇ ಅಲೆ ವೇಗವಾಗಿ ಹಬ್ಬುತ್ತಿದೆ. ಕರ್ನಾಟಕ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳ ಜನರು ತವರಿಗೆ ವಾಪಸ್ ಆಗುತ್ತಿದ್ದಾರೆ.

ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಬರುವ ಜನರಿಂದ ಕೋವಿಡ್ ಸೋಂಕು ಹರಡಬಾರದು ಎಂದು ಧಾರವಾಡ ಜಿಲ್ಲೆಯ ಗ್ರಾಮವೊಂದು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.

 

ಧಾರವಾಡ ಸಮೀಪದ ಹೆಬ್ಬಳ್ಳಿ ಗ್ರಾಮದ ಜನರು ಸ್ವಯಂ ಆಗಿ ತೀರ್ಮಾನ ಕೈಗೊಂಡಿದ್ದಾರೆ. ಸುಮಾರು 18 ಸಾವಿರ ಜನಸಂಖ್ಯೆಯ ಗ್ರಾಮದಲ್ಲಿ ಈಗ 8 ಕೋವಿಡ್ ಪ್ರಕರಣಗಳಿವೆ. ಇವು ಉಳಿದವರಿಗೆ ಹಬ್ಬಬಾರದು ಎಂದು ಈ ಕ್ರಮ ಕೈಗೊಳ್ಳಲಾಗಿದೆ.

 

ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಆಗಮಿಸುವ ಜನರಿಗೆ ಗ್ರಾಮಕ್ಕೆ ನೇರವಾಗಿ ಪ್ರವೇಶವಿಲ್ಲ. ಅವರು ಮೊದಲು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ವರದಿ ನಗೆಟಿವ್ ಬಂದರೆ ಮಾತ್ರ ಗ್ರಾಮಕ್ಕೆ ಬರಬಹುದಾಗಿದೆ.

ದಿನ ಊರ ಹೊರಗೆ ಅವರು ಇದ್ದು ಆ ಮೇಲೆ ಗ್ರಾಮಕ್ಕೆ ಬರಬಹುದಾಗಿದೆ. ಗ್ರಾಮದ ಜನರನ್ನು ಕೋವಿಡ್‌ನಿಂದ ರಕ್ಷಣೆ ಮಾಡಲು ಇಂತಹ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಗ್ರಾಮ ಪಂಚಾಯಿತಿ ಮತ್ತು ಗ್ರಾಮದ ಜನರು ಸೇರಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಕೋವಿಡ್‌ನಿಂದ ರಕ್ಷಣೆ ಮಾಡಲು ಮುಂದಾಗಿದ್ದಾರೆ.

ಏಪ್ರಿಲ್ 28ರ ವರದಿ ಪ್ರಕಾರ ಧಾರವಾಡದಲ್ಲಿ 654 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 29,309ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 3488.


Spread the love

About Laxminews 24x7

Check Also

ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Spread the love ಹೊಸಪೇಟೆ: ರೈತರ ಸಾಲ ಮನ್ನಾದಿಂದ ಹಿಡಿದು ಜನ ಸಾಮಾನ್ಯರ ಬದುಕಿನ ಭಾರವನ್ನು ಕಡಿಮೆ ಮಾಡಿದ್ದು ಕಾಂಗ್ರೆಸ್‌. ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ