ಬೆಂಗಳೂರು: ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಿ, ವಾಹನ ತೆರಿಗೆ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎಪ್ರಿಲ್ 15 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಎಪ್ರಿಲ್ 30 ವರೆಗೆ ವಿಸ್ತರಿಸಿದ ಅವಧಿಯನ್ನು ಮತ್ತು ಮೇ15 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಮೇ 31 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Laxmi News 24×7