Breaking News

ಕೋವಿಡ್ ರೋಗಿಗಳ ಪಾಲಿಗೆ ‘ಹೀರೋ’ : ಆಯಂಬುಲೆನ್ಸ್ ಚಾಲಕನಾದ ಖಳನಟ ಅರ್ಜುನ್ ಗೌಡ

Spread the love

ಬೆಂಗಳೂರು: ಕೋವಿಡ್ ಸೃಷ್ಟಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಕೆಲವು ಬಾಲಿವುಡ್ ಸೆಲೆಬ್ರಿಟಿಗಳು ದೇಶ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ. ಆದರೆ, ಇಲ್ಲೊಬ್ಬ ಚಂದನವನದ ನಟ ಆಯಂಬುಲೆನ್ಸ್ ಚಾಲಕನಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ.

ಶಿವರಾಜ್ ಕುಮಾರ್ ನಟನೆಯ ರುಸ್ತುಂ, ಯುವರತ್ನ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿರುವ ಅರ್ಜುನ್, ಈಗ ರಿಯಲ್ ಲೈಫಿನಲ್ಲಿ ಹೀರೋ ಆಗಿದ್ದಾನೆ. ಇವರು ಕೋವಿಡ್ ಸೋಂಕಿತರಿಗೆ ಸಹಾಯ ಮಾಡಲು ಆಯಂಬುಲೆನ್ಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡುತ್ತಾರೆ ಮತ್ತು ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಮೃತದೇಹಗಳನ್ನು ಸಾಗಿಸಲು ಆಯಂಬುಲೆನ್ಸ್ ಸೇವೆಯನ್ನು ಮಾಡುತ್ತಿದ್ದಾರೆ.

ಈಗಾಗಲೇ ಸಾಕಷ್ಟು ಮಂದಿಗೆ ಅರ್ಜುನ್ ಸಹಾಯ ಮಾಡಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಮಾನವೀಯ ಕೆಲಸಕ್ಕೆ ಮುಂದಾಗಿರುವ ಅರ್ಜುನ್ ಇನ್ನು ಎರಡು ತಿಂಗಳು ಈ ಕೆಲಸವನ್ನು ಮುಂದುವರೆಸುವುದಾಗಿ ಹೇಳಿದ್ದಾರೆ. ಕೇವಲ ರೋಗಿಗಳನ್ನು ಕರೆದೊಯ್ಯುವುದು ಮತ್ತು ಮೃತದೇಹಗಳನ್ನು ಸಾಗಿಸುವುದು ಮಾತ್ರವಲ್ಲದೆ ಆಕ್ಸಿಜನ್ ವ್ಯವಸ್ಥೆಯನ್ನು ಮಾಡಿಸುತ್ತಿದ್ದಾರೆ.

ಇನ್ನು ಬಾಲಿವುಡ್‍ನ ನಟ ಸಲ್ಮಾನ್ ಖಾನ್ ಸೇರಿದಂತೆ ಕೆಲವು ತಾರೆಯರು ಸಂಕಷ್ಟದಲ್ಲಿರುವ ಜನರ ಸಹಾಯಕ್ಕೆ ನಿಂತಿದ್ದಾರೆ. ಕಳೆದ ಬಾರಿ ನಟ ಸೋನು ಸೂದ್ ಸ್ವಂತ ದುಡ್ಡಿನಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದರು. ಈ ಬಾರಿಯೂ ಅವರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ