Breaking News

ಕಾಂಗ್ರೆಸ್ ಮಡಿಲಿಗೆ ರಾಮನಗರ

Spread the love

ರಾಮನಗರ,ಏ.30-ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕರ್ಮಭೂಮಿ ರಾಮನಗರದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ.ರಾಮನಗರ ನಗರಸಭೆಯ 31 ವಾರ್ಡ್‍ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಹಿಡಿದಿದೆ.

ಜೆಡಿಎಸ್ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಎಸ್‍ಡಿಪಿಐ ಒಂದು ವಾರ್ಡ್‍ನಲ್ಲಿ ಖಾತೆ ತೆರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಒಂದು ಕ್ಷೇತ್ರವನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಬೇಲೂರು ಪುರಸಭೆಯಲ್ಲಿ ಕಾಂಗ್ರೆಸ್ ಜಯಬೇರಿ: ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ ಬೇಲೂರು ಪುರಸಭೆಯಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಗಳಿಸಿದೆ.

ಒಟ್ಟು 23 ವಾರ್ಡ್‍ಗಳಿರುವ ಪುರಸಭೆಯಲ್ಲಿ ಕಳೆದ ಬಾರಿ ಜೆಡಿಎಸ್ 13 ಸ್ಥಾನಗಳಲ್ಲಿ ಗೆದ್ದು ಅಧಿಕಾರ ಹಿಡಿದಿತ್ತು, ಈ ಬಾರಿ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 17 ಸ್ಥಾನಗಳಲ್ಲಿ ಗೆದ್ದಿದೆ. ಜೆಡಿಎಸ್ 5 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಬಿಜೆಪಿ ಒಂದು ಸ್ಥಾನದಲ್ಲಿ ಮಾತ್ರ ಗೆದ್ದು ಖಾತೆ ತೆರೆದಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ