Breaking News

ಅಕ್ರಮವಾಗಿ ರೆಮ್ಡೆಸಿವಿರ್ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : ಸಿಎಂ ಬಿಎಸ್ ವೈ ಎಚ್ಚರಿಕೆ

Spread the love

ಬೆಂಗಳೂರು : ರಾಜ್ಯದಲ್ಲಿ ಯಾರಾದ್ರೂ ರೆಮ್ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಇಂದು ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ಅಭಿಯಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಗೆ ದರ ನಿಗದಿಪಡಿಸಲಾಗಿದ್ದು, ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಿದರೆ ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ಹೇಳಿದ್ದಾರೆ.

ರಾಜ್ಯಕ್ಕೆ 3 ಲಕ್ಷ ಲಸಿಕೆ ಕೇಂದ್ರ ಸರ್ಕಾರ ಕಳುಹಿಸಿಕೊಟ್ಟಿದ್ದು, ನಮ್ಮ ಬಳಿ 1 ಲಕ್ಷ ಲಸಿಕೆ ಇದೆ. ರಾಜ್ಯದಲ್ಲಿ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ