Breaking News

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮುನ್ನಡೆ – ನಂದಿ ಗ್ರಾಮದಲ್ಲಿ ಮಮತಾಗೆ ಹಿನ್ನಡೆ

Spread the love

ಕೋಲ್ಕತ್ತಾ: ಇಡೀ ದೇಶವೇ ಕುತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಭಾರೀ ಸ್ಪರ್ಧೆ ನಡೆಯುತ್ತಿದೆ.ಎರಡು ಪಕ್ಷಗಳ ನಡುವೆ ಹಾವು ಏಣಿ ಆಟ ನಡೆಯುತ್ತಿದೆ. ಒಂದು ಚುನಾವಣಾ ಸುತ್ತು ಮುಗಿದಾಗ ಟಿಎಂಸಿ ಮುನ್ನಡೆ ಸಾಧಿಸಿದರೆ ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಾರೆ.

ವಿಶೇಷವಾಗಿ ನಂದಿ ಗ್ರಾಮದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಆರಂಭದ ಸುತ್ತಿನಲ್ಲಿ ಹಿನ್ನಡೆಯಾಗಿದ್ದು, ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 292 ಕ್ಷೇತ್ರಗಳ ಪೈಕಿ ಬಿಜೆಪಿ 66, ಟಿಎಂಸಿ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಎಡ ಪಕ್ಷಗಳು 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. 2016ರ ಚುನಾವಣೆಯಲ್ಲಿ ಟಿಎಂಸಿ 211 ಕ್ಷೇತ್ರಗಳಲ್ಲಿ ಜಯಗಳಿಸಿದರೆ ಕಾಂಗ್ರೆಸ್ 44 ಕ್ಷೇತ್ರಗಳಲ್ಲಿ ಜಯ ಗಳಿಸಿತ್ತು.


Spread the love

About Laxminews 24x7

Check Also

5 ತಾಲೂಕುಗಳ ಶಾಲೆಗೆ ಇಂದು ರಜೆ ಘೋಷಣೆ

Spread the loveಮಂಗಳೂರು/ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್​ 29(ಶುಕ್ರವಾರ) ರಂದು ಜಿಲ್ಲೆಯ ಶಾಲೆ, ಪ್ರೌಢಶಾಲೆ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ