Breaking News
Home / ರಾಜಕೀಯ / ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ

ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ

Spread the love

ಬೆಳಗಾವಿ: ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಅಣ್ಣ ರಮೇಶ ಜಾರಕಿಹೊಳಿಯ ಕ್ಷೇತ್ರ ಗೋಕಾಕದಲ್ಲಿ ಕಾಂಗ್ರೆಸ್ ನ ಸತೀಶ ಜಾರಕಿಹೊಳಿಗೆ ಈ ಕ್ಷಣದಲ್ಲಿ ಹಿನ್ನಡೆ ಆಗಿದ್ದು, ಜತೆಗೆ ಲಕ್ಷ್ಮೀ ಹೆಬ್ಬಾಳಕರ ಅವರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಕುಸಿದಿದೆ.

ಬೆಳಗಾವಿ ಲೋಕಸಭೆ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಪಡೆಯುತ್ತಿದ್ದು, ಬಿಜೆಪಿಯ ಹಾಗೂ ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ ಶುರುವಾಗಿದೆ. ಸದ್ಯ 11,831 ಸಾವಿರಕ್ಕೂ ಹೆಚ್ಚು ಮತಗಳ ಅಂತರವನ್ನು ಮಂಗಳಾ ಅಂಗಡಿ ಕಾಯ್ದುಕೊಂಡಿದ್ದಾರೆ.

ಗೋಕಾಕ್ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಲಕ್ಷ್ಮೀ ಹೆಬ್ಬಾಳಕರ ಅವರ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದೆ. ಇಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಶುಭಂ ಶೇಳಕೆ ಅತಿ ಹೆಚ್ಚು ಮತಗಳ ಮುನ್ನಡೆ ಸಾಧಿಸಿ ಮೊದಲನೇ ಸ್ಥಾನದಲ್ಲಿದ್ದಾರೆ. 11 ಗಂಟೆ ಸುಮಾರಿಗೆ ಎಂಇಎಸ್ ಗೆ 19536, ಬಿಜೆಪಿಗೆ 10,148 ಹಾಗೂ ಕಾಂಗ್ರೆಸ್ ಗೆ 9865 ಮತಗಳನ್ನು ಪಡೆದಿದೆ.

ಒಟ್ಟಾರೆ ಬೆಳಗಾವಿ ಕ್ಷೇತ್ರದಲ್ಲಿ ಇದುವರೆಗಿನ ಮತ ಎಣಿಕೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿಯವರ1,26,555 ಮತ, ಕಾಂಗ್ರೆಸ್ ನ ಸತೀಶ ಜಾರಕಿಹೊಳಿಯವರು 1,15,359 ಮತಗಳನ್ನು ಪಡೆದಿದ್ದಾರೆ. ಸದ್ಯ ಬಿಜೆಪಿ ಅಂತರ 11,196 ಮತಗಳ ಮುನ್ನಡೆ ಸಾಧಿಸಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ