ಬೆಂಗಳೂರು: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಗೆ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಎಂಟಿಸಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಮಮತಾ ಬ್ಯಾನರ್ಜಿ ಸರ್ಕಾರದತ್ತ ಈ ಬಾರಿಯೂ ಮತದಾರರು ವಾಲಿದ್ದು, ಬೆಳಗ್ಗೆ 10 ಗಂಟೆ ಹೊತ್ತಿಗೆ 102 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ಬಿಜೆಪಿಯೂ ಪ್ರಬಲ ಪೈಪೋಟಿ ನೀಡುತ್ತಿದ್ದು 84 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 292 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಯಾವ ಪಕ್ಷ ಜನ ಬೆಂಬಲದೊಂದಿಗೆ ಮ್ಯಾಜಿಕ್ ನಂಬರ್ ದಾಟಲಿದೆ ಎಂಬ ಕುತೂಹಲ ಮನೆ ಮಾಡಿದೆ.
ಇನ್ನು ದಕ್ಷಿಣದಲ್ಲಿ ತಮಿಳುನಾಡಲ್ಲಿ ಚುನಾವಣೋತ್ತರ ಸಮೀಕ್ಷೆಯೇ ನಿಜವಾಗುವ ಸಾಧ್ಯತೆಗಳು ದಟ್ಟವಾಗುತ್ತಿವೆ. ಬಹುತೇಕ ಸಮೀಕೆಗಳು ಅಂದಾಜಿಸಿದಂತೆ ತಮಿಳುನಾಡಿನ ಜನ ಈ ಬಾರಿ ಡಿಎಂಕೆಗೆ ವಿಜಯಮಾಲೆ ಹಾಕಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಬೆಳಗ್ಗೆ 10 ಗಂಟೆ ವೇಳೆ ಡಿಎಂಕೆ ಮೈತ್ರಿ ಕೂಟ 112 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಎಐಡಿಎಂಕೆ ಮೈತ್ರಿಕೂಟ 83 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆಯುಯತ್ತಿದೆ. ಎಐಡಿಎಂಕೆ ಜೊತೆ ಕೈ ಜೋಡಿಸಿರುವ ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
Laxmi News 24×7