Breaking News
Home / ರಾಜಕೀಯ / ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : `LDF’ ಗೆ ಭರ್ಜರಿ ಮುನ್ನಡೆ

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : `LDF’ ಗೆ ಭರ್ಜರಿ ಮುನ್ನಡೆ

Spread the love

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 76 ಸ್ಥಾನಗಳಲ್ಲಿ, ಯುಡಿಎಫ್ 47 ರಲ್ಲಿ ಮತ್ತು ಎನ್ ಡಿಎ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮತ ಎಣಿಕೆ ಆರಂಭವಾಗಿದ್ದು, ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಟಿಎಂಸಿ 173 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 99 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಹಿನ್ನಡೆಯಾಗಿದೆ.

ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಂಶ :ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 76 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಯುಪಿಎ ಮೈತ್ರಿಕೂಟ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ : ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು, ಎಐಎಡಿಎಂಕೆ 77 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಡಿಎಂಕೆ 137 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಡಿಸಿಎಂ ಪನ್ನೀರ ಸೇಲ್ವಂ ಹಿನ್ನಡೆ ಅನುಭವಿಸಿದ್ದಾರೆ.

ಪುದುಚೇರಿ ವಿಧಾನಸಭೆ ಚುನಾವಣೆ ಫಲಿತಾಂಶ : ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶುರವಾಗಿದ್ದು, ಆರಂಭಿಕ ಹಂತದಲ್ಲಿ ಯುಪಿಎ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎನ್ ಡಿಎ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ