Breaking News
Home / ರಾಜ್ಯ / ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : 200 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : 200 ಕ್ಷೇತ್ರಗಳಲ್ಲಿ ಟಿಎಂಸಿ ಮುನ್ನಡೆ

Spread the love

ನವದೆಹಲಿ : ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.

ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ : ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರ ಸಿಗುವ ಸಾಧ್ಯತೆ ಇದೆ. ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 91 ಸ್ಥಾನಗಳಲ್ಲಿ, ಯುಡಿಎಫ್ 48 ರಲ್ಲಿ ಮತ್ತು ಎನ್ ಡಿಎ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮತ ಎಣಿಕೆ ಆರಂಭವಾಗಿದ್ದು, ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದ್ದು, ಟಿಎಂಸಿ 200 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ ಬಿಜೆಪಿ 92 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಹಿನ್ನಡೆಯಾಗಿದೆ.

ಅಸ್ಸಾಂ ವಿಧಾನಸಭೆ ಚುನಾವಣೆ ಫಲಿತಂಶ :ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ 85 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಯುಪಿಎ ಮೈತ್ರಿಕೂಟ 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ : ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಮೈತ್ರಿಕೂಟ ಭಾರಿ ಮುನ್ನಡೆ ಸಾಧಿಸಿದ್ದು, ಎಐಎಡಿಎಂಕೆ 91 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಡಿಎಂಕೆ 142 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 9 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಪುದುಚೇರಿ ವಿಧಾನಸಭೆ ಚುನಾವಣೆ ಫಲಿತಾಂಶ : ಪುದುಚೇರಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶುರವಾಗಿದ್ದು, ಆರಂಭಿಕ ಹಂತದಲ್ಲಿ ಯುಪಿಎ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎನ್ ಡಿಎ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ