Home / ರಾಜಕೀಯ / ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆಯಿಂದ ಹೊಸ ಸರ್ಕಾರ ರಚನೆ

ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆಯಿಂದ ಹೊಸ ಸರ್ಕಾರ ರಚನೆ

Spread the love

ಚೆನ್ನೈ, ಮೇ 2: ತಮಿಳುನಾಡಿನಲ್ಲಿ ಮೇ 6 ರಂದು ಡಿಎಂಕೆ ಹೊಸ ಸರ್ಕಾರ ರಚಿಸುವುದು ಬಹುತೇಕ ಖಾತ್ರಿಯಾಗಿದೆ.

ಇಂದು ರಾಜಕೀಯದಲ್ಲಿ ತಮ್ಮದೇ ಆದ ಸ್ಥಾನವನ್ನು ರೂಪಿಸಿಕೊಳ್ಳಲು ಶ್ರಮಿಸುತ್ತಿರುವ, ಡಿಎಂಕೆ ಮತ್ತು ಎಐಡಿಎಂಕೆ ಪಕ್ಷಗಳ ಹೊಸ ತಲೆಮಾರಿನ ನಾಯಕರ ಭವಿಷ್ಯವೂ ನಿರ್ಧಾರವಾಗಲಿದೆ.

 

ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂ, ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಹಾಗೂ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್‌ಗೆ ಹಿನ್ನಡೆಯಾಗಿದೆ.

ಇರುವ 38 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳಲ್ಲಿ ಡಿಎಂಕೆ ಮುಂದಿರುವ ಕಾರಣ ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸುವುದು ಖಾತ್ರಿಯಾಗುತ್ತಿದೆ.

 

ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹಾಗೂ ಪಕ್ಷ ಯುವ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಕೊಳತತ್ತೂರು ಹಾಗೂ ಚಪಾಕ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಥೌಸೆಂಡ್ ಲೈಟ್ಸ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಖುಷ್ಬೂ ಸುಂದರ್ ವಿರುದ್ಧ ಡಿಎಂಕೆಯ ಎಜಿಲಾನ್ ಮುನ್ನಡೆ ಸಾಧಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ